ಕರ್ನಾಟಕ

karnataka

ETV Bharat / state

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ- ಮೂವರು ಗಾಂಜಾ ಸಾಗಾಟಗಾರರ ಬಂಧನ, ಮಾದಕ ದ್ರವ್ಯ ವಶಕ್ಕೆ

ಡ್ರಗ್ಸ್​ ಕೇಸ್​- ಸಿಸಿಬಿ ಪೊಲೀಸರ ಕಾರ್ಯಾಚರಣೆ - ಮೂವರು ಆರೋಪಿಗಳ ಬಂಧನ

ಗಾಂಜಾ ಸಾಗಾಟಗಾರರ ಬಂಧನ
ಗಾಂಜಾ ಸಾಗಾಟಗಾರರ ಬಂಧನ

By

Published : Jan 8, 2023, 5:01 PM IST

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್​ಪೆಕ್ಟರ್ ಶ್ಯಾಮ ಸುಂದರ್ ನೇತೃತ್ವದಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮಂಗಳೂರಿನಲ್ಲಿ ಅಪಾರ ಪ್ರಮಾಣದ ಮಾದಕ ದ್ಯವ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲದ ಮುಡಿಪು ಕೈರಂಗಳದ ನವಾಜ್ ಯಾನೆ ನವ್ವಾ (35), ನಗರದ ಬಂಟ್ಸ್ ಹಾಸ್ಟೆಲ್ ನಿವಾಸಿ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ( 38) ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಕಿರಣ್ ರಾಜ್ ಶೆಟ್ಟಿ (24) ಬಂಧಿತರು.

ಮೊದಲ ಪ್ರಕರಣದಲ್ಲಿ ಉಳ್ಳಾಲದ ಮುಡಿಪು ಕೈರಂಗಳದ ನವಾಜ್ ಯಾನೆ ನವ್ವಾ (35) ನನ್ನು ಮಾದಕ ವಸ್ತುವನ್ನು ಕೇರಳ-ಕರ್ನಾಟಕದ ಗಡಿಭಾಗದಲ್ಲಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತ ಕೇರಳದ ಗಡಿಭಾಗ ಹಾಗೂ ಮುಡಿಪು ಪರಿಸರದಲ್ಲಿ ಡ್ರಗ್ಸ್​​ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್​ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ಅವರ ನೇತೃತ್ವದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಡಿಪು ಪಂಚಾಯತ್ ಮೈದಾನ ಪರಿಸರದಲ್ಲಿ ಬೈಕ್ ನಲ್ಲಿ ಬಂದು ಮಾದಕವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ವಶಪಡಿಸಿಕೊಂಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ: ಈತನಿಂದ ಒಟ್ಟು 15 ಗ್ರಾಂ ತೂಕದ ರೂ. 75,000/- ಮೌಲ್ಯದ ಮಾದಕ ವಸ್ತುವನ್ನು, ಮೊಬೈಲ್ ಫೋನ್ -2, ಡಿಜಿಟಲ್ ತೂಕ ಮಾಪನ, ನಗದು ರೂ. 3200/- ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಜಾಜ್ ಅವೆಂಜರ್ ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು, ಮೊಬೈಲ್ ಫೋನ್, ನಗದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬೈಕ್​ನ ಒಟ್ಟು ಮೌಲ್ಯ ರೂ 1,13,700/-ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಯು ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿಕೊಂಡು ದೇರಳಕಟ್ಟೆ, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ನವಾಝ್ ಯಾನೆ ನವ್ವಾ ಯಾನೆ ಮುಡಿಪು ನವಾಸ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ, ದರೋಡೆಗೆ ಸಂಬಂಧಪಟ್ಟಂತೆ ಒಟ್ಟು 8 ಪ್ರಕರಣಗಳು, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಪ್ರಕರಣ ಹೀಗೆ ಒಟ್ಟು 11 ಪ್ರಕರಣಗಳು ದಾಖಲಾಗಿರುತ್ತದೆ. ಎರಡನೇ ಪ್ರಕರಣದಲ್ಲಿ ಆರೋಪಿ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ (38) ನಗರದ ಫ್ಲಾಟ್ ವೊಂದರಲ್ಲಿ ಗಾಂಜಾವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದನು. ಈತ (Overseas Citizen of India) ಸಾಗರೋತ್ತರ ಭಾರತೀಯ ಪ್ರಜೆಯಾಗಿದ್ದು, ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈತ ನಗರದ ಬಂಟ್ಸ್ ಹಾಸ್ಟೆಲ್ ಪರಿಸರದ ಫ್ಲಾಟ್​ವೊಂದರಲ್ಲಿ ಗಾಂಜಾವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್​ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ಅವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ ಫ್ಲಾಟಿಗೆ ದಾಳಿ ನಡೆಸಿ ಈತನನ್ನು ಬಂಧಿಸಿದ್ದಾರೆ.

ಕದ್ರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ: ಈತನಿಂದ ಒಟ್ಟು 2 ಕೆ ಜಿ ತೂಕದ ರೂ. 50 ಸಾವಿರ ಮೌಲ್ಯದ ಗಾಂಜಾ, 2 ಮೊಬೈಲ್ ಫೋನ್, ನಗದು ರೂ 7000/- ಡಿಜಿಟಲ್ ತೂಕ ಮಾಪನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಅಂದಾಜು ರೂ 78,000/-ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಯು ಅಕ್ರಮವಾಗಿ ಮಾದಕ ವಸ್ತುಗಳನ್ನು ವಿಶಾಖಪಟ್ಟಣದಿಂದ ಖರೀದಿಸಿಕೊಂಡು ಬಂದು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದನು. ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.

ಇನ್ನು ಮೂರನೇ ಪ್ರಕರಣದಲ್ಲಿ ಆರೋಪಿ ಕಿರಣ್ ರಾಜ್ ಶೆಟ್ಟಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಾರುತಿ ಆಲ್ಟೋ 800 ಕಾರಿನಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ. ಈತನಿಂದ 27.100 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಾರುತಿ ಆಲ್ಟೋ 800 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್​ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ರಾಜೇಂದ್ರ ಬಿ ನೇತೃತ್ವದ ಸಿಸಿಬಿ ಪೊಲೀಸರು ನೀರುಮಾರ್ಗದ ಕುಟ್ಟಿಕಳ ಎಂಬಲ್ಲಿ ಪತ್ತೆ ಹಚ್ಚಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಕಿರಣ್ ರಾಜ್ ಶೆಟ್ಟಿಯನ್ನು ಬಂಧಿಸಿದ್ದಾರೆ.

ಆರೋಪಿಯು ಗಾಂಜಾ ಸಾಗಾಟ ಮಾಡುತ್ತಿದ್ದ ಮಾರುತಿ ಆಲ್ಟೋ 800 ಕಾರನ್ನು ಮತ್ತು ಅದರಲ್ಲಿ ಸಾಗಾಟ ಮಾಡುತ್ತಿದ್ದ 27.100 ಕೆಜಿ ಗಾಂಜಾವನ್ನು, ಮೊಬೈಲ್ ಫೋನ್, ನಗದು ರೂ. 1500/- ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಾರುತಿ ಅಲ್ಟೋ ಕಾರು, ಮೊಬೈಲ್ ಫೋನ್ ನ ಒಟ್ಟು ಮೌಲ್ಯ ರೂ. 9,88,500/- ಆಗಿರುತ್ತದೆ ಎಂದು ಅಂದಾಜಿಸಲಾಗಿದೆ.

ಗಾಂಜಾ ಸಾಗಾಟ ಜಾಲದಲ್ಲಿ ಹಲವರು ಭಾಗಿ: ಆರೋಪಿಯು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದನು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಗಾಂಜಾ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿ ಕಿರಣ್ ರಾಜ್ ಶೆಟ್ಟಿಯ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯು ಕರ್ನಾಟಕ- ಕೇರಳ ರಾಜ್ಯದ ಗಡಿಭಾಗದವನಾಗಿದ್ದು, ಕರ್ನಾಟಕ, ಕೇರಳದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು, ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದನು.

ಓದಿ:ಹೊಸ ವರ್ಷದ ಮೋಜಿಗೆ ಡ್ರಗ್ಸ್​ ದಂಧೆ: ಸಿಸಿಬಿ ಬಲೆಗೆ ಬಿದ್ದ 8 ಮಂದಿ

ABOUT THE AUTHOR

...view details