ಕರ್ನಾಟಕ

karnataka

ETV Bharat / state

ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ - ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

accused-detained-in-mla-harish-poonja-threat-case
ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ

By

Published : Oct 14, 2022, 8:43 PM IST

ಬಂಟ್ವಾಳ(ದಕ್ಷಿಣ ಕನ್ನಡ):ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಹೇಳಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶುಕ್ರವಾರ ರಾತ್ರಿ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಮಂಗಳೂರು ಫಳ್ನೀರು ನಿವಾಸಿ ರಿಯಾಜ್ (38) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಅಲ್ಲದೆ ವಾಹನವನ್ನೂ ವಶಪಡಿಸಿಕೊಳ್ಳಲಾಗಿದೆ. ಆರೋಪಿಗೆ ಇದುವರೆಗೂ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಹಾಗೂ ಯಾವುದೇ ಆಯುಧಗಳು ಆತನ ಬಳಿ ಇರಲಿಲ್ಲ ಎಂದು ತಿಳಿಸಿದ್ದಾರೆ.

ರಸ್ತೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಸಂದರ್ಭದ ಜಗಳ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ.

ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಗುರುವಾರ ರಾತ್ರಿ ಸುಮಾರು 11.15ಕ್ಕೆ ಘಟನೆ ನಡೆದಿತ್ತು. ಶಾಸಕ ಪೂಂಜಾ ಅವರ ಕಾರು ಚಾಲಕನ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಹರೀಶ್ ಪೂಂಜಾ ಮೇಲೆ ತಲ್ವಾರ್ ಝಳಪಿಸಿದ ಪ್ರಕರಣ: ಜಿಹಾದಿ ಶಕ್ತಿಗಳೇ ಕಾರಣ ಎಂದ ಶಾಸಕರು

ABOUT THE AUTHOR

...view details