ಕರ್ನಾಟಕ

karnataka

ETV Bharat / state

ಸುರತ್ಕಲ್​ ನೈತಿಕ ಪೊಲೀಸ್ ಗಿರಿ.. ಬಜರಂಗದಳಕ್ಕೆ ಸೇರಿದ ಐವರು ಆರೋಪಿಗಳಿಗೆ ಠಾಣೆಯಲ್ಲಿ ಜಾಮೀನು.. - moral policing in surathkal

ಆರೋಪಿಗಳಿಗೆ ಪೊಲೀಸ್ ಠಾಣೆಯಲ್ಲಿ ಜಾಮೀನು ನೀಡಿರುವ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಸಡಿಲ ಸೆಕ್ಷನ್ ಹಾಕಿ ಠಾಣೆಯಲ್ಲಿ ಜಾಮೀನು ನೀಡಲಾಗಿದೆ. ಪೊಲೀಸ್ ಇಲಾಖೆ ಇಷ್ಟು ದುರ್ಬಲ ಆಗಬಾರದು. ಬಿಡುಗಡೆಗೊಂಡಿರುವ ಆರೋಪಿಗಳನ್ನು ಕಠಿಣ ಸೆಕ್ಷನ್ ನಡಿ ಮರುಬಂಧನ ಮಾಡಬೇಕು ಎಂದು ಒತ್ತಾಯಿಸಿದ್ದಾರೆ..

accused-who-participated-in-moral-policing-in-mangalore
ಸುರತ್ಕಲ್ ನಲ್ಲಿ ನೈತಿಕ ಪೊಲೀಸ್ ಗಿರಿ

By

Published : Sep 28, 2021, 7:12 PM IST

ಮಂಗಳೂರು :ಅನ್ಯಮತೀಯ ಜೋಡಿ ಎಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿ ಬಂಧನಕ್ಕೊಳಗಾದ ಐವರು ಆರೋಪಿಗಳಿಗೆ ಪೊಲೀಸ್ ಠಾಣೆಯಲ್ಲಿ ಜಾಮೀನು ನೀಡಲಾಗಿದೆ.

ಕಳೆದ ಭಾನುವಾರ ಉಡುಪಿಯ ಮಲ್ಪೆಗೆ ಹೋಗಿದ್ದ ಮಂಗಳೂರಿನ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ವಾಪಸ್​ ಬರುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಲಾಗಿತ್ತು. ಈ ವೇಳೆ ಟ್ರಾಫಿಕ್ ಇನ್ಸ್ ಪೆಕ್ಟರ್ ಶರೀಫ್ ಹಲ್ಲೆ ನಡೆಸದಂತೆ ತಡೆಯಲು ಯತ್ನಿಸಿದ್ದರು.

ರವಿವಾರ ನಡೆದ ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಜರಂಗದಳ ಕಾರ್ಯಕರ್ತರಾದ ಪ್ರೀತಂ ಶೆಟ್ಟಿ, ಅರ್ಶಿತ್, ಶ್ರೀನಿವಾಸ, ರಾಕೇಶ್ ಮತ್ತು ಅಭಿಷೇಕ್ ಎಂಬುವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದರು. ಇವರಿಗೆ ಇದೀಗ ಠಾಣೆಯಲ್ಲಿ ಜಾಮೀನು ನೀಡಿ ಬಿಡುಗಡೆಗೊಳಿಸಲಾಗಿದೆ.

ಡಿವೈಎಫ್ಐ ರಾಜ್ಯಾಧ್ಯಕ್ಷ ಆಕ್ರೋಶ

ಆರೋಪಿಗಳಿಗೆ ಪೊಲೀಸ್ ಠಾಣೆಯಲ್ಲಿ ಜಾಮೀನು ನೀಡಿರುವ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಸಡಿಲ ಸೆಕ್ಷನ್ ಹಾಕಿ ಠಾಣೆಯಲ್ಲಿ ಜಾಮೀನು ನೀಡಲಾಗಿದೆ. ಪೊಲೀಸ್ ಇಲಾಖೆ ಇಷ್ಟು ದುರ್ಬಲ ಆಗಬಾರದು. ಬಿಡುಗಡೆಗೊಂಡಿರುವ ಆರೋಪಿಗಳನ್ನು ಕಠಿಣ ಸೆಕ್ಷನ್ ನಡಿ ಮರುಬಂಧನ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಓದಿ:15ರ ಬಾಲಕಿ ಮೇಲೆ ಗ್ಯಾಂಗ್​ರೇಪ್​, ಸಿಗರೇಟ್​ನಿಂದ ಎದೆ ಸುಟ್ಟು, ಕೊಲೆ ; ಮರಕ್ಕೆ ಮೃತದೇಹ ನೇಣು

ABOUT THE AUTHOR

...view details