ಸುಳ್ಯ (ದಕ್ಷಿಣ ಕನ್ನಡ):ಸುಳ್ಯದ ಜೂನಿಯರ್ ಕಾಲೇಜ್ ಬಳಿಯಿಂದ ಜ್ಯೋತಿ ವೃತ್ತದವರೆಗೆ ಮೆಸ್ಕಾಂ ವತಿಯಿಂದ ಅಳವಡಿಸಲಾಗುತ್ತಿರುವ ಭೂಗತ ಕೇಬಲ್ ಕೆಲಸ ಯಥಾವತ್ತಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಸುಳ್ಯದ ಜೂನಿಯರ್ ಕಾಲೇಜ್ ಬಳಿಯಿಂದ ಜ್ಯೋತಿ ವೃತ್ತದವರೆಗೆ ಸುಮಾರು 1 ಕಿಮೀ 33 ಕೆ.ವಿ ವಿದ್ಯುತ್ ಪೂರೈಕೆ ಸಾಮರ್ಥ್ಯದ ಭೂಗತ ಕೇಬಲ್ ಅಳವಡಿಕೆ ಮಾಡಲಾಗುತ್ತಿದೆ. ಆದರೆ ಈ ಕೆಲಸವನ್ನು ಗುತ್ತಿಗೆದಾರರು ಸರಿಯಾದ ರೀತಿಯಲ್ಲಿ ಮಾಡುತ್ತಿಲ್ಲ ಎಂದು ಸುಳ್ಯದ ಆರ್ಟಿಐ ಕಾರ್ಯಕರ್ತ ಟಿ.ಎಂ. ಶಾರಿಕ್ ಆರೋಪ ಮಾಡಿದ್ದಾರೆ. ಮೆಸ್ಕಾಂ ಅಧಿಕಾರಿಗಳು ಹೇಳುವ ಪ್ರಕಾರ ಕನಿಷ್ಠ ಐದು ಅಡಿ ಆಳದ ಗುಂಡಿಯಲ್ಲಿ ಈ ಕೇಬಲ್ ಅಳವಡಿಕೆ ಮಾಡಬೇಕಾಗುತ್ತದೆ. ಕೇಬಲ್ ಅಳವಡಿಸುವ ಸ್ಥಳದಲ್ಲೇ ನೀರಿನ ಪೈಪ್ಲೈನ್ ಸೇರಿದಂತೆ ಇತರ ಕೇಬಲ್ಗಳು ಇರಬಾರದು. ಆಕಸ್ಮಿಕವಾಗಿ ಇದ್ದಲ್ಲಿ ಅದಕ್ಕೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು.