ಮಂಗಳೂರು:ರಿಜಿಸ್ಟರ್ ಪೋಸ್ಟ್ ಬಟವಾಡೆ ಮಾಡಲು ಹೋದ ಪೋಸ್ಟ್ಮ್ಯಾನ್ಗೆ ನಿಂದನೆ ಹಾಗೂ ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯ ಅಪರಾಧಿ ಯುವಕನಿಗೆ 10 ತಿಂಗಳ ಸಾದಾ ಸಜೆ ಹಾಗೂ 2,500 ರೂ. ದಂಡ ವಿಧಿಸಿ ಆದೇಶಿಸಿದೆ.
2020ರ ಜೂನ್ 16ರ ಬೆಳಗ್ಗೆ ಬೋಳೂರಿನ ಮಠದಕಣಿ ರಸ್ತೆಯ ಮನೆಯಲ್ಲಿರುವ ಆರೋಪಿ ಮನೀಶ್ ಮನೆಗೆ ರಿಜಿಸ್ಟರ್ ಪೋಸ್ಟ್ ಬಟವಾಡೆ ಮಾಡಲು ಪೋಸ್ಟ್ಮ್ಯಾನ್ ದಿನೇಶ್ ಅವರು ಹೋಗಿದ್ದರು. ಆ ಸಂದರ್ಭದಲ್ಲಿ ಆರೋಪಿ ಮನೀಶ್ ಅವಾಚ್ಯ ಪದಗಳಿಂದ ನಿಂದಿಸಿ, ಪೋಸ್ಟ್ಮ್ಯಾನ್ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದ. ಅಲ್ಲದೇ ಅಂಚೆ ಇಲಾಖೆಗೆ ಸಂಬಂಧಿಸಿದ ಕಾಗದ ಪತ್ರಗಳನ್ನು ಹರಿದು ಹಾಕಿ ದಿನೇಶ್ ಅವರ ಬೈಕ್ನ್ನು ರಾಡ್ನಿಂದ ಜಖಂಗೊಳಿಸಿದ್ದ.