ಕಡಬ:ನಗರದ ಕೋಡಿಂಬಾಳದಲ್ಲಿ ನಡೆದಿದ್ದ ಮಹಿಳೆ ಮತ್ತು ಮಗುವಿನ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿಯನ್ನು ಸಲ್ಲಿಸಲಾಗಿದೆ.
ಕಡಬ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ - ಕಡಬ ಆಸಿಡ್ ದಾಳಿ ಪ್ರಕರಣ
ಕಡಬದ ಮಹಿಳೆ ಮತ್ತು ಮಗುವಿನ ಮೇಲಿನ ಆ್ಯಸಿಡ್ ದಾಳಿ ಖಂಡಿಸಿರುವ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾದಿಂದ ಕಡಬ ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿ ಮತ್ತು ಕಡಬ ಪೊಲೀಸ್ ಠಾಣೆಯ ಎಸ್ಐ ಮೂಲಕ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
![ಕಡಬ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ Acid attack case](https://etvbharatimages.akamaized.net/etvbharat/prod-images/768-512-5900712-thumbnail-3x2-dk.jpg)
ಕಡಬ ಆಸಿಡ್ ದಾಳಿ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸಿಎಂಗೆ ಮನವಿ
ಕಡಬ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸಿಎಂಗೆ ಮನವಿ
ಅದೇ ರೀತಿ ಸಂತ್ರಸ್ತರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು ಹಾಗೂ ಸಂತ್ರಸ್ತೆ ಸ್ವಪ್ನಾ ರವಿಕುಮಾರ್ ಅವರ ಮೂವರು ಹೆಣ್ಣು ಮಕ್ಕಳ ಶಿಕ್ಷಣದ ಪೂರ್ತಿ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಮತ್ತು ಆರೋಪಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಎಪಿಎಂಸಿ ನಿರ್ದೇಶಕಿ ಹಾಗೂ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಪುಲಸ್ತ್ಯಾ ರೈ ಮಾತನಾಡಿ, ದಕ್ಷಿಣಕನ್ನಡ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಸರೋಜಿನಿ ಜಯಪ್ರಕಾಶ್, ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ತಿಮ್ಮಪ್ಪ ಗೌಡ ಸೇರಿದಂತೆ ಹಲವು ಪ್ರಮುಖರು ಈ ವೇಳೆ ಹಾಜರಿದ್ದರು.