ಮಂಗಳೂರು:ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆ್ಯಸಿಡ್ ದಾಳಿಗೊಳಗಾದ ಮಹಿಳೆಯನ್ನು ಇಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಭೇಟಿಯಾದರು.
ಆ್ಯಸಿಡ್ ಸಂತ್ರಸ್ತೆಗೆ ಸಾಂತ್ವನ ಹೇಳಿದ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ - Shyamala Kundar, member of the National Women's Commission
ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆ್ಯಸಿಡ್ ದಾಳಿಗೊಳಗಾದ ಮಹಿಳೆಯನ್ನು ಇಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಭೇಟಿಯಾದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಸಿಡ್ ದಾಳಿಯಾದ ಸಂತ್ರಸ್ತೆ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ನಡೆದುಕೊಂಡ ರೀತಿ ಅಮಾನವೀಯ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸುವುದರ ಬದಲು, ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದರು. ಮಹಿಳೆಯರಿಗೆ ಅನ್ಯಾಯವಾದಾಗ ರಕ್ಷಣೆ ನೀಡಬೇಕಾದ ಪೊಲೀಸರೇ ಕರ್ತವ್ಯಲೋಪ ಎಸಗಿದ್ದಾರೆ. ಇಂತಹ ತಪ್ಪನ್ನು ಕ್ಷಮಿಸುವಂತಿಲ್ಲ ಎಂದು ಹೇಳಿದರು.
ಸಂತ್ರಸ್ತೆಯ ಮೂರು ಮಕ್ಕಳ ಶಿಕ್ಷಣ ಹಾಗೂ ಇನ್ನಿತರ ವ್ಯವಸ್ಥೆಯನ್ನು ಮಹಿಳಾ ಆಯೋಗದ ಇಲಾಖೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದಾತನಿಗೆ ಕಠಿಣವಾದ ಶಿಕ್ಷೆಯಾಗಬೇಕೆಂದು ಕಾನೂನು ಹೋರಾಟ ನಡೆಸಲು ಕಾನೂನು ಸೇವಾ ಪ್ರಾಧಿಕಾರದ ನೆರವನ್ನು ನೀಡಲಿದ್ದೇವೆ. ಆಕೆಗೆ ಮಾನಸಿಕ ಸ್ಥೈರ್ಯ ತುಂಬಲು ಸಖಿ ಸೆಂಟರ್ನಿಂದ ಆಪ್ತ ಸಲಹಾ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.