ಮಂಗಳೂರು:ಶಾಲಾಕಾಲೇಜುಗಳ ರಜೆ ವಿಚಾರದಲ್ಲಿ ಗೊಂದಲ ಸೃಷ್ಟಿಸಿದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ತಿಳಿಸಲಾಗುವುದು ಎಂದು ದ.ಕ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ತಿಳಿಸಿದ್ದಾರೆ.
ಶಾಲಾ ಕಾಲೇಜು ರಜೆ ವಿಷಯದಲ್ಲಿ ಗೊಂದಲ ಸೃಷ್ಟಿಸಿದವರ ವಿರುದ್ಧ ಕ್ರಮ - ಮಂಗಳೂರಲ್ಲಿ ಭಾರಿ ಮಳೆ
ಶಾಲಾ ಕಾಲೇಜುಗಳ ರಜೆ ವಿಚಾರದಲ್ಲಿ ಗೊಂದಲ ಸೃಷ್ಟಿಸಿದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ತಿಳಿಸಲಾಗುವುದು ಎಂದು ದ.ಕ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ತಿಳಿಸಿದ್ದಾರೆ.
ಶಾಲಾ ಕಾಲೇಜು ರಜೆ ವಿಷಯದಲ್ಲಿ ಗೊಂದಲ ಸೃಷ್ಟಿಸಿದವರ ವಿರುದ್ಧ ಕ್ರಮ
ನಾಳೆ (ಆಗಸ್ಟ್ 9) ಕ್ಕೆ ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ನೆರೆ ಪೀಡಿತ ಪ್ರದೇಶದಲ್ಲಿದ್ದು, ಈವರೆಗೆ ರಜೆ ಘೋಷಿಸಿಲ್ಲ. ಆ. 7 ರಂದು ಹೊರಡಿಸಲಾದ ಆ. 8 ರ ರಜೆ ಪ್ರಕಟಣೆಯನ್ನು ತಿದ್ದಿ 9 ಎಂದು ಮಾಡಿ ನಾಳೆ ರಜೆ ಎಂದು ಪ್ರಚಾರ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಅವರು ವಿನಂತಿ ಮಾಡಿಕೊಂಡಿದ್ದಾರೆ.