ಕರ್ನಾಟಕ

karnataka

By

Published : Sep 5, 2020, 9:58 AM IST

ETV Bharat / state

ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ ಪೂರ್ಣ

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಗುರುವಾರ ಹಾಗೂ ಶುಕ್ರವಾರ ಆರೋಪಿ ಆದಿತ್ಯ ರಾವ್​ನನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗಿತ್ತು.

Aditya Rao
ಆದಿತ್ಯ ರಾವ್

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್​​ನನ್ನು ಎರಡು ದಿನಗಳ ಮಂಪರು ಪರೀಕ್ಷೆಗೆ ಒಳಪಡಿಸಿದ್ದು, ಅದೀಗ ಪೂರ್ಣಗೊಂಡಿದೆ‌.

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಗುರುವಾರ ಹಾಗೂ ಶುಕ್ರವಾರ ಆರೋಪಿ ಆದಿತ್ಯ ರಾವ್​ನನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗಿತ್ತು. ಮಂಪರು ಪರೀಕ್ಷೆ ಪೂರ್ಣಗೊಂಡಿರುವುದರಿಂದ ಆರೋಪಿಯನ್ನು ಮತ್ತೆ ಮಂಗಳೂರಿಗೆ ಕರೆ ತರಲಾಗುತ್ತದೆ. ದೋಷಾರೋಪ ಪಟ್ಟಿ ಈಗಾಗಲೇ ಸಲ್ಲಿಕೆಯಾಗಿದ್ದರೂ ಮಂಪರು ಪರೀಕ್ಷೆಯಲ್ಲಿ ದೊರೆತ ಮಾಹಿತಿ ಸೇರಿಸಿ ಇನ್ನಷ್ಟು ಹೆಚ್ಚುವರಿಯಾಗಿ ದೋಷಾರೋಪ ಪಟ್ಟಿ ಸಲ್ಲಿಸಲು ಅವಕಾಶವಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಆರೋಪಿ ಜ. 2ರಂದು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ. ಅದರೆ ಮರುದಿನ ತಾನೇ ಸ್ಫೋಟಕ ಇರಿಸಿದ್ದಾಗಿ ಬೆಂಗಳೂರಿನಲ್ಲಿ ಶರಣಾಗಿದ್ದ. ಬಳಿಕ‌ ಆತನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದರು. ಈತನ ವಿರುದ್ಧ ಪೊಲೀಸರು ಈಗಾಗಲೇ 306 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಆದರೆ ಕೆಲವೊಂದು ಪ್ರಶ್ನೆಗಳಿಗೆ ಪೊಲೀಸರಿಗೆ ಸ್ಪಷ್ಟವಾಗಿ ಉತ್ತರ ದೊರಕದ ಕಾರಣ ಮಂಪರು ಪರೀಕ್ಷೆ ನಡೆಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು. ನ್ಯಾಯಾಲಯ ಈ ಮನವಿಯನ್ನು ಪುರಸ್ಕರಿಸಿ ಮಂಪರು ಪರೀಕ್ಷೆಗೆ ಅನುಮತಿ ನೀಡಿತ್ತು.

ABOUT THE AUTHOR

...view details