ಮಂಗಳೂರು:ವಕೀಲರಿಗೆ ಹಾಗೂ ನ್ಯಾಯಾಲಯಕ್ಕೆ ಅವಮಾನ ಮಾಡಲಾಗಿದೆ ಎಂದು ಗಿರಿಗಿಟ್ ತುಳು ಸಿನಿಮಾದ ವಿರುದ್ಧ ಜಿಲ್ಲೆಯ ವಕೀಲರ ಸಂಘ ನ್ಯಾಯಾಲಯದ ಮೆಟ್ಟಿಲೇರಿದೆ.
ಗಿರಿಗಿಟ್ ತುಳು ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ವಕೀಲರು - ಸಿನಿಮಾಕ್ಕೆ ತಡೆಯಾಜ್ಞೆ
ವಕೀಲರಿಗೆ ಹಾಗೂ ನ್ಯಾಯಾಲಯಕ್ಕೆ ಅವಮಾನ ಮಾಡಲಾಗಿದೆ ಎಂದು ಗಿರಿಗಿಟ್ ತುಳು ಸಿನಿಮಾದ ವಿರುದ್ಧ ಮಂಗಳೂರು ವಕೀಲರ ಸಂಘ ನ್ಯಾಯಾಲಯದ ಮೆಟ್ಟಿಲೇರಿರುವ ಘಟನೆ ನಡೆದಿದೆ.
ಗಿರಿಗಿಟ್ ತುಳು ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ವಕೀಲರು
ಸಿನಿಮಾದಲ್ಲಿ ವಕೀಲರಿಗೆ ಅವಹೇಳನ ಮಾಡಲಾಗಿದೆ ಎಂದು ಆರೋಪ ಮಾಡಿರುವ ವಕೀಲರ ಸಂಘ, ಸಿನಿಮಾಕ್ಕೆ ತಡೆಯಾಜ್ಞೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದೆ.
5ನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶ ಹರೀಶ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ.