ಬಂಟ್ವಾಳ (ದಕ್ಷಿಣ ಕನ್ನಡ):ರಾಜ್ಯದ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದ್ದು, ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಬಂಟ್ವಾಳ ತಾಲೂಕಿನ 26.93 ಹೆಕ್ಟೇರ್ ಭೂಮಿಗೆ ಅಪಾರ ಹಾನಿಯಾಗಿದೆ.
ಬಂಟ್ವಾಳದಲ್ಲಿ ಮಳೆ ಪರಿಣಾಮ: 26 ಹೆಕ್ಟೇರ್ ಕೃಷಿ ಭೂಮಿಗೆ ಹಾನಿ - ದಕ್ಷಿಣಕನ್ನಡ ಸುದ್ದಿ
ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕಿನ ಒಟ್ಟು 6.73 ಹೆಕ್ಟೇರ್ ತೋಟಗಾರಿಕೆ ಹಾಗೂ 20.2 ಹೆಕ್ಟೇರ್ ಕೃಷಿ ಭೂಮಿಗೆ ಹಾನಿಯಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.
ಭಾರಿ ಮಳೆ: ಬಂಟ್ವಾಳ ತಾಲೂಕಿನಲ್ಲಿ ಕೃಷಿ, ತೋಟಗಾರಿಕೆಯ 26.93 ಹೆಕ್ಟೇರ್ ಭೂಮಿಗೆ ಹಾನಿ
ಭಾರಿ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಒಟ್ಟು 6.73 ಹೆಕ್ಟೇರ್ ತೋಟಗಾರಿಕೆ ಹಾಗೂ 20.2 ಹೆಕ್ಟೇರ್ ಕೃಷಿ ಭೂಮಿಗೆ ಹಾನಿಯಾಗಿದೆ. ಅಲ್ಲದೇ, ಎರಡು ಅಂಗನವಾಡಿಗಳ ಆವರಣ ಗೋಡೆ ಕುಸಿದಿದ್ದು, 2 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.
ರೈತರ ಅಡಿಗೆ ತೋಟಗಳು, ಭತ್ತದ ಗದ್ದೆಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟ ಉಂಟಾಗಿದೆ.