ಮಂಗಳೂರು:ನಗರದ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಇಂದಿನಿಂದ ಮತ್ತೆ ವ್ಯಾಪಾರ - ವಹಿವಾಟು ಆರಂಭಿಸಿದ್ದಾರೆ.
ಮಂಗಳೂರು ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರ ಪುನಾರಂಭ...! - Mangalore latest news
ನೂತನ ಮಾರುಕಟ್ಟೆ ನಿರ್ಮಿಸುವ ಸಲುವಾಗಿ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸಲಾಗಿತ್ತು. ಆದರೀಗ ವ್ಯಾಪಾರಿಗಳು ವ್ಯಾಪಾರ ಆರಂಭಿಸಿದ್ದಾರೆ.
ಕೊರೊನಾ ಸೋಂಕಿನಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿ ನೂತನ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಿ ಏಪ್ರಿಲ್ 7ರಿಂದ ನಗರದ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸಲು ಜಿಲ್ಲಾಡಳಿತ ಆದೇಶಿಸಿತ್ತು. ವ್ಯಾಪಾರಿಗಳಿಗೆ ವ್ಯಾಪಾರ ವಹಿವಾಟು ನಡೆಸಲು ಎಪಿಎಂಸಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು.
ಆದರೆ, ಎಪಿಎಂಸಿಯಲ್ಲಿ ಬಹಳಷ್ಟು ಅವ್ಯವಸ್ಥೆ ಇದ್ದ ಕಾರಣ ವ್ಯಾಪಾರಿಗಳು ಕೋರ್ಟ್ ಮೆಟ್ಟಿಲೇರಿತ್ತು. ತಮಗೆ ಮತ್ತೆ ಸೆಂಟ್ರಲ್ ಮಾರುಕಟ್ಟೆಯಲ್ಲಿಯೇ ವ್ಯಾಪಾರ ನಡೆಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿತ್ತು. ಮಂಗಳೂರು ಮಹಾನಗರ ಪಾಲಿಕೆ ಇದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಈ ಮಧ್ಯೆ ಒಂದು ಬಾರಿ ವ್ಯಾಪಾರಿಗಳು ಬಲವಂತವಾಗಿ ಅಂಗಡಿ ತೆರೆಯಲು ಪ್ರಯತ್ನ ನಡೆಸಿತ್ತು. ಆದರೆ, ಪಾಲಿಕೆ ಪೊಲೀಸ್ ಬಲ ಪ್ರಯೋಗಿಸಿ ವ್ಯಾಪಾರಿಗಳ ಪ್ರಯತ್ನಕ್ಕೆ ತಣ್ಣೀರೆರಚಿತ್ತು.
ಇದೀಗ ಮಂಗಳೂರು ಮಹಾನಗರ ಪಾಲಿಕೆಯೇ ತಮ್ಮ ಆದೇಶ ಹಿಂತೆಗೆದಿದ್ದು, ಪರಿಣಾಮ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಮತ್ತೆ ವ್ಯಾಪಾರ ವಹಿವಾಟು ಆರಂಭಿಸಿದ್ದಾರೆ.