ಕರ್ನಾಟಕ

karnataka

ETV Bharat / state

ಭಾರಿ ಭ್ರಷ್ಟಾಚಾರ ಆರೋಪ: ಪೊಲೀಸ್​ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲು - Complaint to Lokayukta by social worker

ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್​ ಕಬೀರ್​ ಎಂಬುವವರಿಂದ ಲೋಕಾಯುಕ್ತಗೆ ದೂರು - ಮಂಗಳೂರು ಕಮಿಷನರ್​ಗೆ ಲೋಕಾಯುಕ್ತ ನೋಟಿಸ್​

allegation-of-massive-corruption-file-complaint-to-lokayukta-against-police-officers
ಭಾರೀ ಭ್ರಷ್ಟಾಚಾರ ಆರೋಪ: ಪೊಲೀಸ್​ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲು

By

Published : Jan 28, 2023, 5:02 PM IST

Updated : Jan 28, 2023, 7:25 PM IST

ಪೊಲೀಸ್​ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲು

ಮಂಗಳೂರು: ಭ್ರಷ್ಟಾಚಾರ ಮಾಡಿದ್ದಾರೆ ಎಂದು ಉಳ್ಳಾಲ ಇನ್ಸ್​ಪೆಕ್ಟರ್ ಸಂದೀಪ್ ಮತ್ತು ಎಸ್​ಐ ಪ್ರದೀಪ್ ವಿರುದ್ದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್​ ಕಬೀರ್​ ಎಂಬುವವರು ಲೋಕಾಯುಕ್ತಗೆ ದೂರು ನೀಡಿದ್ದಾರೆ. ಈ ಬಗ್ಗೆ ಲೋಕಾಯುಕ್ತ ಮಂಗಳೂರು ನಗರ ಪೊಲೀಸ್ ಕಮೀಷನರ್ ಅವರಿಗೆ ಫೆ.14ರ ಒಳಗಡೆ ತನಿಖಾ ವರದಿ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸೂಚಿಸಲಾಗಿದೆ.

ಉಳ್ಳಾಲ ಇನ್ಸ್​ಪೆಕ್ಟರ್ ಸಂದೀಪ್, ಎಸ್ಐ ಪ್ರದೀಪ್ ವಿರುದ್ದ ಮೊಹಮ್ಮದ್ ಕಬೀರ್ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಠಾಣೆಯಲ್ಲಿ ಹಣ ವಸೂಲು ಮಾಡಲು ಹಮೀದ್ ಎಂಬಾತನನ್ನು ಬ್ರೋಕರ್ ಆಗಿ ಇಟ್ಟುಕೊಳ್ಳಲಾಗಿತ್ತು ಎಂಬ ಆರೋಪದ ಜೊತೆಗೆ ಗಾಂಜಾ ಮಾಫಿಯ, ಮರಳು ಮಾಫಿಯ, ಹೊಟೇಲ್ ಮಾಲೀಕರಿಂದ ಹಣಕ್ಕೆ ಬೇಡಿಕೆ ಇಡುವ ಬಗ್ಗೆ ಲೋಕಾಯುಕ್ತದಲ್ಲಿ ದೂರು ನೀಡಿದ್ದರು. ಇಬ್ಬರು ಪೊಲೀಸ್ ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ಹಣ ಸಂಪಾದನೆ ಬಗ್ಗೆ ಮೊಹಮ್ಮದ್ ಕಬೀರ್ ದೂರಿನಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ, ಪೊಲೀಸರ ಭ್ರಷ್ಟಾಚಾರದ ಬಗ್ಗೆ ದೂರು ನೀಡಿರುವುದಕ್ಕೆ ತನಗೆ ಬೆದರಿಕೆಯನ್ನು ಹಾಕಲಾಗುತ್ತಿದೆ. ಅಲ್ಲದೇ ದೂರು ನೀಡಿದ ಬಗ್ಗೆ ತನ್ನನ್ನೇ ವಿಚಾರಣೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಚಿನ್ನದ ಅಂಗಡಿ ದರೋಡೆ ಪ್ರಕರಣದಲ್ಲಿ ವಶಕ್ಕೆ ಪಡೆದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್​ಪೆಕ್ಟರ್ ಸಂದೀಪ್ ಅವರೇ ಇಟ್ಟುಕೊಂಡಿದ್ದಾರೆ ಎಂಬ ಆರೋಪವನ್ನು ದೂರಿನಲ್ಲಿ ಮೊಹಮ್ಮದ್ ಕಬೀರ್ ಉಲ್ಲೇಖಿಸಿದ್ದರು. ಅಲ್ಲದೇ ಮಂಗಳೂರು ಕಮಿಷನರ್ ಶಶಿಕುಮಾರ್ ವಿರುದ್ದವೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಅಧಿಕಾರ ದುರುಪಯೋಗ ಹಾಗೂ ಲಂಚದ ಆಪಾದನೆ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಕಲಂ.9 ರಡಿಯಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ತಿಳಿಸಿದ್ದು, 2023ರ ಫೆ.14 ರೊಳಗೆ ಸೂಕ್ತ ವರದಿ ನೀಡುವಂತೆ ನಗರ ಪೊಲೀಸ್ ಕಮಿಷನರ್​ ಶಶಿಕುಮಾರ್​ಗೆ ತಿಳಿಸಲಾಗಿದೆ.

ದೂರುದಾರರ ಜೀವಕ್ಕೆ ಬೆದರಿಕೆಯಿರುವುದರಿಂದ ಗೌಪ್ಯತೆಯನ್ನು ಕಾಪಾಡುವಂತೆ ನಿವೇದಿಸಿಕೊಂಡಿದ್ದರು. ಅಧಿಕಾರ ದುರುಪಯೋಗ ಮತ್ತು ಲಂಚದ ಆಪಾದನೆ ಮಾಡಿರುವುದರಿಂದ ಕರ್ನಾಟಕ ಲೋಕಾಯುಕ್ತ ಕಲಂ.9 ರ ಅಡಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ನೋಟಿಸ್​ನಲ್ಲಿ ತಿಳಿಸಿದೆ.

ನನಗೆ ಯಾವುದೇ ನೋಟಿಸ್ ನೀಡಲಾಗಿಲ್ಲ - ಮಂಗಳೂರು ಕಮಿಷನರ್​: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಅರ್ಜಿಯನ್ನು ಪರಿಶೀಲಿಸಲು ಮತ್ತು ಇತರ ವರದಿಯನ್ನು ನೀಡುವಂತೆ ನನ್ನನ್ನು ಕೇಳಲಾಗಿದೆ. ನಾನು ದಕ್ಷಿಣ ಎಸಿಪಿಯಿಂದ ವಿಚಾರಣಾ ವರದಿಯನ್ನು ಕೋರಿದ್ದೇನೆ ಮತ್ತು ಅದನ್ನು ಲೋಕಾಯುಕ್ತಕ್ಕೆ ಸಲ್ಲಿಸಲಾಗುವುದು. ಈ ಅರ್ಜಿಯು ಈಗ ದಕ್ಷಿಣದ ಎಸಿಪಿಯೊಂದಿಗೆ ವಿಚಾರಣೆಯಲ್ಲಿದೆ. ನನಗೆ ಯಾವುದೇ ನೋಟಿಸ್ ನೀಡಲಾಗಿಲ್ಲ. ಅಧಿಕಾರಿಯಾಗಿ ಪರೀಕ್ಷಿಸಲು ನನ್ನನ್ನು ಕೇಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ :ಆದಾಯಕ್ಕಿಂತ ಅಧಿಕ ಆಸ್ತಿ: ಬೆಳ್ತಂಗಡಿ ಸಹ್ಯಾದ್ರಿ ವಲಯ ಅರಣ್ಯಾಧಿಕಾರಿಗೆ 5 ವರ್ಷ ಜೈಲು ಶಿಕ್ಷೆ

Last Updated : Jan 28, 2023, 7:25 PM IST

ABOUT THE AUTHOR

...view details