ಸುಳ್ಯ: ಸುಳ್ಳು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆ ಸಿಬ್ಬಂದಿ ನನ್ನನ್ನು ಠಾಣೆಗೆ ಕರೆಸಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಶೇರ್ ಮಾಡಿದ್ದು, ಭಾರಿ ವೈರಲ್ ಆಗುತ್ತಿದೆ.
ಸುಳ್ಯ ತಾಲೂಕಿನ ಪಾಲ್ತಾಡಿ ಸಮೀಪದ ಮಣಿಕ್ಕರ ಕೊಡ್ಯಕ್ಕ ನಿವಾಸಿ ಅಜಿತ್.ಎಸ್ ಎಂಬ ಯುವಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ.
ಟಿವಿ ರಿಪೇರಿ ಕೆಲಸ ಮಾಡಿಕೊಂಡಿರುವ ಈತ, ಬೆಳ್ಳಾರೆ ಪೊಲೀಸ್ ಠಾಣೆಯ ಸಿಬ್ಬಂದಿ ಬಾಲು ಸರ್ ಮತ್ತು ಇನ್ನೋರ್ವ ಪೊಲೀಸ್ ಸಿಬ್ಬಂದಿ ನನ್ನನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ. ಠಾಣೆಯಲ್ಲಿ ಆ ದಿನದ ಸಿಸಿ ಕ್ಯಾಮರಾ ಪರಿಶೀಲಿಸಿದರೆ ಉನ್ನತ ಮಟ್ಟದ ಅಧಿಕಾರಿಗಳಿಗೆ ತಿಳಿಯಬಹುದು ಎಂದು ಅಜಿತ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ವಿಡಿಯೋ ಮಾಡಿ ಹರಿ ಬಿಟ್ಚ ಯುವಕ ಅಜಿತ್ ಶೇರ್ ಮಾಡಿರುವ ವಿಡಿಯೋದಲ್ಲಿ ಯುವಕನ ಮುಖ ಊದಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ತಕ್ಷಣವೇ ತನಿಖೆ ನಡೆಸಬೇಕೆಂಬ ಮಾತುಗಳು ಕೇಳಿ ಬಂದಿವೆ.
ಓದಿ:ಮುಳುಗಲಿರುವ ಜಕಾರ್ತ.. ಹೊಸ ರಾಜಧಾನಿಯತ್ತ ಇಂಡೋನೇಷ್ಯಾ ಸರ್ಕಾರ: ಕಾರಣಗಳೇನು?