ಮಂಗಳೂರು:ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯಗಳನ್ನು ಸುರಿಯುವ ಪಚ್ಚನಾಡಿ ಘಟಕದಲ್ಲಿ ಸಮಸ್ಯೆಗಳು ಕಂಡು ಬಂದಿರುವುದರಿಂದ ಪರ್ಯಾಯ ಸ್ಥಳ ಹುಡುಕುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೂಚಿಸಿದ್ದಾರೆ.
ಪಚ್ಚನಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಚ್ಚನಾಡಿ ಘಟಕ ತ್ಯಾಜ್ಯ ನಿರ್ವಹಣೆಗೆ ತಾಂತ್ರಿಕವಾಗಿ ಯುಕ್ತವಲ್ಲ ಎಂದು ಕಂಡುಬಂದಿದೆ. ತ್ಯಾಜ್ಯ ನಿರ್ವಹಣೆ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಪರ್ಯಾಯ ಜಾಗ ಪರಿಶೀಲಿಸಬೇಕು ಎಂದು ಸೂಚನೆ ನೀಡಿದ್ದಾರೆ.ಕಲ್ಲು ಕೋರೆ ನಡೆಸಿ ಪಾಳು ಬಿದ್ದಿರುವ ಸ್ಥಳಗಳು ತ್ಯಾಜ್ಯ ನಿರ್ವಹಣೆಗೆ ಸೂಕ್ತವಾಗಿದೆ. ಈ ಬಗ್ಗೆಯೂ ಗಮನಿಸಬೇಕು. ಇಂತಹ ಸ್ಥಳ ದೂರ ಇದ್ದರೂ, ತ್ಯಾಜ್ಯ ನಿರ್ವಹಣೆಗೆ ಸೂಕ್ತವಾಗಿದೆ ಎಂದು ಅವರು ಹೇಳಿದ್ದಾರೆ.