ಕರ್ನಾಟಕ

karnataka

ETV Bharat / state

ಸ್ವಯಂ ಸ್ಫೂರ್ತಿಯಿಂದ ರಕ್ಷಣಾ ಕಾರ್ಯಕ್ಕೆ ಸದಾ ಬದ್ಧರಾಗಿರಬೇಕು: ವೀರೇಂದ್ರ ಹೆಗ್ಗಡೆ ಕರೆ

ಮೊದಲು ತಮ್ಮನ್ನು ತಾವು ರಕ್ಷಣೆ ಮಾಡಿಕೊಂಡು ಬಳಿಕ ಇತರರ ರಕ್ಷಣೆಗೆ ನೆರವಾಗಬೇಕು. ಪ್ರಜ್ಞಾವಂತರಾಗಿ ತಾವೂ ಬದುಕಿ, ಇತರರನ್ನೂ ಬದುಕಲು ನೆರವಾಗುವುದು ಮಾನವ -ಧರ್ಮವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ವಿಪತ್ತು ನಿರ್ವಹಣೆ ಕಾರ್ಯಕ್ರಮದ ಲೋಕಾರ್ಪಣೆ
ವಿಪತ್ತು ನಿರ್ವಹಣೆ ಕಾರ್ಯಕ್ರಮದ ಲೋಕಾರ್ಪಣೆ

By

Published : Jun 23, 2020, 8:03 AM IST

ಬೆಳ್ತಂಗಡಿ (ದಕ್ಷಿಣ ಕನ್ನಡ): ಸ್ವಯಂ ಸೇವಕರು ಧೈರ್ಯ, ತ್ಯಾಗ, ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವ ಹೊಂದಿದ್ದು, ಸ್ವಯಂ ಸ್ಪೂರ್ತಿಯಿಂದ ರಕ್ಷಣಾ ಕಾರ್ಯಕ್ಕೆ ಸದಾ ಬದ್ಧರಾಗಿರಬೇಕು ಹಾಗೂ ಸಿದ್ಧರಾಗಿರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ವಿಪತ್ತು ನಿರ್ವಹಣೆ ಕಾರ್ಯಕ್ರಮದ ಲೋಕಾರ್ಪಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ಆಯೋಜಿಸಿದ ವಿಪತ್ತು ನಿರ್ವಹಣೆ ಕಾರ್ಯಕ್ರಮದ ಲೋಕಾರ್ಪಣೆ ಮತ್ತು ಸ್ವಯಂ ಸೇವಕರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ತಕ್ಷಣ ಸ್ಪಂದಿಸಬೇಕು. ಮೊದಲು ತಮ್ಮನ್ನು ತಾವು ರಕ್ಷಣೆ ಮಾಡಿಕೊಂಡು ಬಳಿಕ ಇತರರ ರಕ್ಷಣೆಗೆ ನೆರವಾಗಬೇಕು. ಪ್ರಜ್ಞಾವಂತರಾಗಿ ತಾವೂ ಬದುಕಿ, ಇತರರೂ ಬದುಕಲು ನೆರವಾಗುವುದು ಮಾನವ ಧರ್ಮವಾಗಿದೆ. ಆಪತ್ತು ನಿರ್ವಹಣೆ ಮಾಡಲು ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ವೈಜ್ಞಾನಿಕವಾಗಿ ಶಿಸ್ತು ಬದ್ಧವಾಗಿ ವಿಪತ್ತು ನಿರ್ವಹಣೆ ಸ್ವಯಂ ಸೇವಕರಿಗೆ ಮಾಹಿತಿ, ಮಾರ್ಗದರ್ಶನ ಹಾಗೂ ತರಬೇತಿಯ ಅಗತ್ಯವಾಗಿದೆ. ರಕ್ಷಣಾ ಪರಿಕರಗಳ ಸಮರ್ಪಕ ಬಳಕೆ ಬಗ್ಗೆ ಅವರಿಗೆ ಮಾಹಿತಿ ನೀಡಲಾಗುವುದು. ಸ್ವಯಂ ಸೇವಕರು ತಮ್ಮ ಮನೆಯವರಿಗೂ ವಿಪತ್ತು ನಿರ್ವಹಣೆ ಬಗ್ಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಮಾತನಾಡಿ, ಸೂಕ್ತ ತರಬೇತಿಯಿಂದ ಸ್ವಯಂ ಸೇವಕರು ಉತ್ತಮ ರೀತಿಯ ಸೇವೆ ನೀಡಲು ಅನುಕೂಲವಾಗುತ್ತದೆ ಎಂದು ಹೇಳಿ ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ, ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ಜನರ ಪ್ರಾಣ ಹಾಗೂ ಸಂಪತ್ತಿನ ರಕ್ಷಣೆಗೆ ಕಟಿಬದ್ಧರಾಗಿರಬೇಕು ಎಂದು ಸಲಹೆ ನೀಡಿದರು.

ABOUT THE AUTHOR

...view details