ಮಂಗಳೂರು:ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಪೊಲೀಸರು ಲಾಠಿಚಾರ್ಜ್ ನಡೆಸಿ ಜಿಲ್ಲೆಯಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದ್ದಾರೆ ಎಂದು ಎಸ್ವೈಎಸ್ನ ಪ್ರಧಾನ ಕಾರ್ಯದರ್ಶಿ ಡಾ. ಎಂಎಸ್ಎಂ ಝೈನೀ ಕಾಮಿಲ್ ಆರೋಪಿಸಿದ್ದಾರೆ.
ಪೊಲೀಸರಿಂದ ಭಯದ ವಾತವರಣ ಸೃಷ್ಟಿ: ಝೈನೀ ಕಾಮಿಲ್ ಆರೋಪ - atmosphere of fear by the police in mangalore
ಮಂಗಳೂರಿನಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಪೊಲೀಸರು ಲಾಠಿಚಾರ್ಜ್ ನಡೆಸಿ ಜಿಲ್ಲೆಯಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದ್ದಾರೆ ಎಂದು ಎಸ್ವೈಎಸ್ನ ಪ್ರಧಾನ ಕಾರ್ಯದರ್ಶಿ ಡಾ. ಎಂಎಸ್ಎಂ ಝೈನೀ ಕಾಮಿಲ್ ಆರೋಪಿಸಿದ್ದಾರೆ.
ಎಸ್ವೈಎಸ್ನ ಪ್ರಧಾನ ಕಾರ್ಯದರ್ಶಿ ಡಾ.ಎಂಎಸ್ಎಂ ಝೈನೀ ಕಾಮಿಲ್
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಾಯಕರ ಮೇಲೆ ಗೋಲಿಬಾರ್ ನಡೆಸಿ, ಅವರನ್ನು ತಪ್ಪಿತಸ್ಥರನ್ನಾಗಿ ಬಿಂಬಿಸುವ ಪ್ರಯತ್ನ ಮಾಡಲಾಗಿದೆ. ಎಫ್ಐಆರ್ ದಾಖಲೆ ಮಾಡಿ, ಅವರಿಗೆ ಸರ್ಕಾರ ಘೋಷಣೆ ಮಾಡಿದ ಪರಿಹಾರವನ್ನು ಹಿಂಪಡೆಯುವಂತೆ ಮಾಡಲಾಗಿದೆ ಎಂದು ದೂರಿದರು.