ಕರ್ನಾಟಕ

karnataka

ETV Bharat / state

ಬೆಳ್ತಂಗಡಿಯ ಪೆರ್ಲದಲ್ಲಿ ಪುರಾತನ ಶಿವಲಿಂಗ ಪತ್ತೆ..! - Etv Bharat Kannada

ದೇವಸ್ಥಾನದ ಕುರುಹು ಇದ್ದ ಸ್ಥಳದಲ್ಲಿ ಪುರಾತನ ಕಾಲದ ಶಿವಲಿಂಗ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ancient-shivling-found
ಪೆರ್ಲದಲ್ಲಿ ಪುರಾತನ ಶಿವಲಿಂಗ ಪತ್ತೆ

By

Published : Dec 17, 2022, 7:20 PM IST

ಪೆರ್ಲದಲ್ಲಿ ಪುರಾತನ ಶಿವಲಿಂಗ ಪತ್ತೆ

ಬೆಳ್ತಂಗಡಿ: ಇಲ್ಲಿಯ ಪೆರ್ಲದಲ್ಲಿ ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಸ್ಥಳವೊಂದರಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾಗಿದೆ.

ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಪೆರ್ಲದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿತ್ತು. ಈ ವೇಳೆ, ಪರಿಸರದಲ್ಲಿ ಶಿವನ ಸಾನ್ನಿಧ್ಯವಿದೆಯೆಂದು ಗೋಚರಿಸುತ್ತದೆ ಎಂದು ತಿಳಿಸಿದ್ದರು. ಅಂತೆಯೇ ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ.

ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಕೆಲಸ ಕಾರ್ಯಗಳು ನಡೆಯುತ್ತಿದ್ದು ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿಕುಮಾರ್ ಇವರ ಅಧ್ಯಕ್ಷತೆಯಲ್ಲಿ ಮೊಕ್ತೇಸರ ಹಾಗೂ ಕಾರ್ಯದರ್ಶಿ ಕೃಷ್ಣ ಒಪ್ಪಂತಾಯ ಒಳಗೊಂಡ ಸಮಿತಿ ರಚಿಸಲಾಗಿದೆ. ಅಷ್ಟಮಂಗಲ ಪ್ರಶ್ನೆ ಸಂದರ್ಭದಲ್ಲಿ ಶ್ರೀಧರ ಗೋರೆ ಅವರ ಜತೆಗೆ ಮಂಗಳೂರು ಮಂಗಳಾದೇವಿ ದೇವಸ್ಥಾನದ ಅರ್ಚಕ ಗಣೇಶ್ ಐತಾಳ, ಶ್ರೀನಿಧಿ ಮುಚ್ಚಿನ್ನಾಯ ಕಾರಿಂಜ, ಅರ್ಚಕ ಅನಂತ ಇರ್ವತ್ರಾಯ ಸಹಕರಿಸಿದರು.

ಸ್ಥಳೀಯರಾದ ರಾಮಣ್ಣ ನಾಯ್ಕ, ಉಜಿರೆ ಗ್ರಾ.ಪಂ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ, ಪಿ.ಬಿ ಬೂಚನಾಯ್ಕ, ದಾಮೋದರ, ಪ್ರವೀಣ್ ಕುಮಾರ್, ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಪುರಾತನ ಕಾಲದ ಗಣೇಶನ ವಿಗ್ರಹ ಪತ್ತೆ

ABOUT THE AUTHOR

...view details