ಮಂಗಳೂರು: ಅಯೋಧ್ಯೆಯ ಶ್ರೀರಾಮಮಂದಿರದ ಆಸುಪಾಸಿನಲ್ಲಿ ಸುಸಜ್ಜಿತ ಕರ್ನಾಟಕ ಯಾತ್ರಿನಿವಾಸ ನಿರ್ಮಾಣ ಮಾಡಲು ನಿವೇಶನ ಒದಗಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಬೇಕೆಂದು ಸಿಎಂ ಯಡಿಯೂರಪ್ಪನವರಿಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದಿದ್ದಾರೆ.
ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ಮುಜರಾಯಿ ಸಚಿವ ಮನವಿ - ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಆಸುಪಾಸಿನಲ್ಲಿ ಕರ್ನಾಟಕ ಯಾತ್ರಿ ನಿವಾಸಕ್ಕೆ ನಿವೇಶನ ಒದಗಿಸಲು ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಬೇಕು ಎಂದು ಸಿಎಂ ಬಿಎಸ್ವೈ ಅವರಲ್ಲಿ ಮುಜರಾಯಿ ಸಚಿವ ಪೂಜಾರಿ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ಮನವಿ
ಮುಜರಾಯಿ ಸಚಿವ ಪೂಜಾರಿ
ಅಯೋಧ್ಯೆಯ ಶ್ರೀರಾಮ ದೇಗುಲ ಕೋಟ್ಯಂತರ ಹಿಂದೂಗಳಿಗೆ ತಿರುಮಲ ತಿರುಪತಿ ಮಾದರಿಯಲ್ಲಿ ಪವಿತ್ರ ಯಾತ್ರಾ ಸ್ಥಳ ಆಗುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಕರ್ನಾಟಕದಿಂದ ಅಯೋಧ್ಯೆಗೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಾ ಭವನದ ಅಗತ್ಯವಿದೆ. ಆದ್ದರಿಂದ ಅಯೋಧ್ಯೆಯ ಶ್ರೀರಾಮನ ದೇಗುಲದ ಹತ್ತಿರ ಕನಿಷ್ಠ 3ರಿಂದ 5 ಎಕರೆ ಭೂಮಿಯನ್ನು ಕರ್ನಾಟಕ ಭವನ ನಿರ್ಮಾಣಕ್ಕಾಗಿ ಮೀಸಲಿಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.