ಕರ್ನಾಟಕ

karnataka

ETV Bharat / state

ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಮನವಿ

ಅನುದಾನದ ಕೊರತೆಯಿಂದ ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ಕಾಮಗಾರಿ ಅರ್ಧದಲ್ಲಿ ನಿಂತಿದೆ. ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ 25 ಲಕ್ಷ ರೂಪಾಯಿಗಳ ಅವಶ್ಯಕತೆಯಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

Appeals to Home Minister for release of additional grant
Appeals to Home Minister for release of additional grant

By

Published : Aug 12, 2020, 6:44 PM IST

ಮಂಗಳೂರು:ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕಂಕನಾಡಿ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿದ ಶಾಸಕರು, ಈಗಾಗಲೇ ಕಂಕನಾಡಿ ನಗರ ಪೊಲೀಸ್ ಠಾಣೆಯು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕಟ್ಟಡ ತೀರಾ ಹಳೆಯದಾಗಿರುವ ಕಾರಣ ಸೋರುತ್ತಿದ್ದು, ದಾಖಲೆಗಳನ್ನು ಸಂರಕ್ಷಿಸುವುದು ಸಹ ಕಷ್ಟಕರವಾಗಿದೆ. ಸ್ಥಳಾವಕಾಶದ ಕೊರತೆಯಿಂದ ಸಾರ್ವಜನಿಕರಿಗೆ ಮತ್ತು ಸಿಬ್ಬಂದಿಗೆ ವಾಹನ ನಿಲುಗಡೆಯ ಸಮಸ್ಯೆಯೂ ಇದೆ.

ಪೊಲೀಸ್ ಇಲಾಖೆಗೆ ಸೇರಿದ ವಸತಿ ಗೃಹದ ಪಕ್ಕದಲ್ಲಿ ನೂತನ ಠಾಣೆಯನ್ನು ನಿರ್ಮಿಸಲು ಇಲಾಖೆಯಿಂದ 10 ಲಕ್ಷ ರೂಪಾಯಿ ಮಂಜೂರುಗೊಳಿಸಿ, ನಿರ್ಮಿತಿ ಕೇಂದ್ರ ಮಂಗಳೂರು ಇದರಿಂದ ಹೊಸ ಠಾಣೆಗೆ 2 ಅಂತಸ್ತಿನ ಕಟ್ಟಡ ನಿರ್ಮಿಸಲಾಗಿದೆ. ಆ ನಂತರ ಅನುದಾನದ ಕೊರತೆಯಿಂದ ಕಾಮಗಾರಿ ಅರ್ಧದಲ್ಲಿ ನಿಂತಿದ್ದು, ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ 25 ಲಕ್ಷ ರೂಪಾಯಿಗಳ ಅವಶ್ಯಕತೆಯಿದೆ. ಹಾಗಾಗಿ ಪ್ರಥಮ ಆದ್ಯತೆಯ ಮೇರೆಗೆ ಅನುದಾನ ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ಬಿಜೆಪಿ ಮುಖಂಡ ಜಗದೀಶ್ ಶೇಣವ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details