ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜುಗಳಲ್ಲಿ 5 ವರ್ಷಗಳ ಮೂರು ಹೊಸ ಸ್ನಾತಕೋತ್ತರ ಪದವಿಗಳನ್ನು ಆರಂಭಿಸಲು ಶೈಕ್ಷಣಿಕ ಮಂಡಳಿ ಅನುಮೋದಿಸಿದೆ. ವಿಶ್ವವಿದ್ಯಾಲಯದ ರಾಣಿ ಅಬ್ಬಕ್ಕ ಸೆನೆಟ್ ಸಭಾಂಗಣದಲ್ಲಿ ಮಂಗಳೂರು ವಿವಿ ಕುಲಪತಿ ಡಾ.ಪಿ.ಎಸ್ ಯಡಪಡಿತ್ತಾಯ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಮಂಡಳಿಯ ಚತುರ್ಥ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.
ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜಿನ ಪ್ರಸ್ತಾವನೆಯ ಪ್ರಕಾರ 5 ವರ್ಷಗಳ ಇಂಟಿಗ್ರೇಟೆಡ್ ಎಂಬಿಎ, 5 ವರ್ಷಗಳ ಎಂಕಾಂ ಬ್ಯುಸಿನೆಸ್ ಡೇಟಾ ಅನಲಿಟಿಕ್ಸ್ ಮತ್ತು 5 ವರ್ಷಗಳ ಇಂಟಿಗ್ರೇಟೆಡ್ ಸ್ನಾತಕೋತ್ತರ - ಎಲೆಕ್ಟ್ರಾನಿಕ್ ಪದವಿ ಪಠ್ಯಕ್ರಮಗಳಿಗೆ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಯಿತು.