ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 60 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದ ಕೇರಳದ ಕಾಸರಗೋಡು ಮೂಲದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟಿರುವುದು ಪತ್ತೆಯಾಗಿದೆ.