ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಇನ್ನೋವೇಶನ್ ಹಬ್ ಸ್ಥಾಪಿಸಲಾಗುವುದು: ಸಚಿವ ಅಶ್ವತ್ಥನಾರಾಯಣ - ಈಟಿವಿ ಭಾರತ ಕನ್ನಡ

ಬೆಂಗಳೂರು ನಗರವು ದೇಶದ ಸಿಲಿಕಾನ್ ವ್ಯಾಲಿ ಎಂದು ಹೆಸರಾಗಿರುವಂತೆ ಮಂಗಳೂರು ನಗರವು ದೇಶದ 'ಸಿಲಿಕಾನ್ ಬೀಚ್' ಎಂದು ಹೆಸರಾಗಬೇಕೆಂದು ಇದೇ ಸಂದರ್ಭದಲ್ಲಿ ಹೇಳಿದರು.

Mangalore Innovation Hub
ಮಂಗಳೂರು ಟೆಕ್ನೋವಾನ್ಜಾ ಅಂಗವಾಗಿ ನಡೆದ ಸಮಾವೇಶ

By

Published : Dec 17, 2022, 7:54 PM IST

ಮಂಗಳೂರು: ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ಯಮಗಳ ಬೆಳವಣಿಗೆ ಉತ್ತೇಜಿಸಲು ನಗರದಲ್ಲಿ ಎರಡು ಲಕ್ಷ ಚದರ ಅಡಿ ವಿಸ್ತಾರದ 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಹೇಳಿದರು.

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮಂಗಳೂರು ಕ್ಲಸ್ಟರ್ ವತಿಯಿಂದ ಆಯೋಜಿಸಲಾಗಿರುವ ಮಂಗಳೂರು ಟೆಕ್ನೋವಾನ್ಜಾ ಅಂಗವಾಗಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಂಗಳೂರು ಇನ್ನೋವೇಶನ್ ಹಬ್ ಅ​ನ್ನು ಕಿಯೋನಿಕ್ಸ್ ಮೂಲಕ ನಿರ್ಮಿಸಲಾಗುವುದು. ಅಲ್ಲದೇ ಮಂಗಳೂರು ಔದ್ಯಮಿಕ ಕ್ಲಸ್ಟರ್​ಗೆ 25 ಕೋಟಿ ರೂಪಾಯಿಗಳ ನಿಧಿ ಈಗಾಗಲೇ ನೀಡಲಾಗಿದೆ ಎಂದರು.

ಇನ್ಫೋಸಿಸ್ ಮತ್ತು ಇತರ ಕಂಪನಿಗಳ ಸಹಕಾರ ಪಡೆದು ಎರಡು ಲಕ್ಷ ಚದರಡಿ ವಿಸ್ತೀರ್ಣದ ಜಾಗದ ವ್ಯವಸ್ಥೆ ಮಾಡಿಕೊಂಡು 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲು ಅನುವು ಮಾಡಿಕೊಡಲಾಗುವುದು. ಇದು ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಗೆ ಇಂಬು ನೀಡಲಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಭಾಗವು ಮೊದಲಿನಿಂದಲೂ ಬ್ಯಾಂಕಿಂಗ್ ಚಟುವಟಿಕೆಗಳಿಗೆ ಪ್ರಸಿದ್ದವಾಗಿದೆ. ಅದಕ್ಕೆ ಪೂರಕವಾದ ಕಾರ್ಯ ಪರಿಸರವು ಇಲ್ಲಿದೆ. ಇದನ್ನು ಗಮನದಲ್ಲಿರಿಸಿಕೊಂಡು ಮಂಗಳೂರು ವಲಯವನ್ನು ಫಿನ್ ಟೆಕ್ ಹಬ್ ಆಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದರು.

ಮಂಗಳೂರು ಕ್ಲಸ್ಟರ್​ನಲ್ಲಿ 50 ಫಿನ್ ಟೆಕ್ ಕಂಪನಿಗಳನ್ನು ಸ್ಥಾಪಿಸಬೇಕು ಎನ್ನುವುದು ಸರಕಾರದ ಗುರಿಯಾಗಿದೆ. ಈ ಮೂಲಕ 2030ರ ವೇಳೆಗೆ ರಾಜ್ಯವು ನಡೆಸಲು ಉದ್ದೇಶಿಸಿರುವ 500 ಬಿಲಿಯನ್ ಡಾಲರ್ ವಹಿವಾಟಿನಲ್ಲಿ ಅರ್ಧದಷ್ಟು ಕೊಡುಗೆ ಈ ಭಾಗದ ಉದ್ಯಮಗಳಿಂದಲೇ ಬರುವಂತಾಗಬೇಕು. ಬೆಂಗಳೂರು ನಗರವು ದೇಶದ ಸಿಲಿಕಾನ್ ವ್ಯಾಲಿ ಎಂದು ಹೆಸರಾಗಿರುವಂತೆ ಮಂಗಳೂರು ನಗರವು ದೇಶದ 'ಸಿಲಿಕಾನ್ ಬೀಚ್' ಎಂದು ಹೆಸರಾಗಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.

ಇದನ್ನೂ ಓದಿ:ಅದಾನಿ ಒಡೆತನದ ಸಿಮೆಂಟ್​ ಘಟಕ ಹಠಾತ್​ ಬಂದ್​: ಶೋಕಾಸ್​ ನೋಟಿಸ್​ ಜಾರಿ ಮಾಡಿದ ಹಿಮಾಚಲ ಸರ್ಕಾರ

ABOUT THE AUTHOR

...view details