ಕರ್ನಾಟಕ

karnataka

ETV Bharat / state

ಪಾಂಡೇಶ್ವರ ಸಂಚಾರ ಪೊಲೀಸ್ ಠಾಣೆಯ ಎಎಸ್ಐ ನಿಧನ

ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರಕ್ಕೆ ಸಿಎಆರ್ ಮೈದಾನದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು..

By

Published : Mar 14, 2021, 8:07 PM IST

asi-narayan-b-nayak-died-in-mangalore
ಉಪ ನಿರೀಕ್ಷಕ ನಾರಾಯಣ ಬಿ.ನಾಯ್ಕ್ (59)

ಮಂಗಳೂರು : ಕರ್ತವ್ಯನಿರತ ವೇಳೆ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದ ಪಾಂಡೇಶ್ವರ ಸಂಚಾರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ನಾರಾಯಣ ಬಿ.ನಾಯ್ಕ್ (59) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ಉಪ ನಿರೀಕ್ಷಕ ನಾರಾಯಣ ಬಿ.ನಾಯ್ಕ್ ದೇಹಕ್ಕೆ ಪುಷ್ಪನಮನ
ನಗರದ ಮೇರಿಹಿಲ್ ಇನ್ ಲ್ಯಾಂಡ್ ಅಪಾರ್ಟ್​ಮೆಂಟ್​ ಬಳಿ‌ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ವೇಳೆ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಇಂದು ಬೆಳಗ್ಗೆ 8.20ರ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರಿಗೆ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು
ಓದಿ:ಪದೇಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ವಿರುದ್ಧ ಹೆಚ್​ಡಿಕೆ ಕಿಡಿ

ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರಕ್ಕೆ ಸಿಎಆರ್ ಮೈದಾನದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು.

ABOUT THE AUTHOR

...view details