ಕರ್ನಾಟಕ

karnataka

ETV Bharat / state

ಸುಬ್ರಹ್ಮಣ್ಯ ಷಷ್ಠಿ: ಯುವಕನಿಗೆ ಪೊಲೀಸ್​ ಹಲ್ಲೆ ಆರೋಪ, ಆಸ್ಪತ್ರೆಗೆ ದಾಖಲು

ಕಡಬದ ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು ತನಗೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Assaulted youth
ಹಲ್ಲೆಗೊಳಗಾದ ಯುವಕ

By

Published : Dec 2, 2022, 9:43 AM IST

ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಹಣ ನೀಡುವಂತೆ ಒತ್ತಾಯಿಸಿ, ಪೊಲೀಸ್​ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು ಪೊಲೀಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾಗಿ ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಹಲ್ಲೆಗೊಳಗಾದ ಯುವಕ

ಈ ಬಗ್ಗೆ ಹೇಳಿಕೆ ನೀಡಿರುವ ಶಶಿಕಿರಣ್, 'ಚಂಪಾಷಷ್ಠಿ ಉತ್ಸವದಲ್ಲಿ ನಾನು ಜ್ಯೂಸ್, ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದೆ. ಪಂಚಮಿಯ ದಿನ ರಾತ್ರಿ 12 ಗಂಟೆ ಸುಮಾರಿಗೆ ಅಂಗಡಿಗೆ ಬಂದ ಪೊಲೀಸ್ ಸಿಬ್ಬಂದಿ ಬೀಮಣ್ಣ ಗೌಡ ಎಂಬವರು ಹಣ ನೀಡುವಂತೆ ಒತ್ತಾಯಿಸಿದ್ದರು. ಆ ವೇಳೆ ನಾನು ಪೊಲೀಸ್ ಸಿಬ್ಬಂದಿಗೆ ಹೆದರಿ 1000 ರೂ. ನೀಡಿದೆ. ಈ ಹಣ ಸಾಕಾಗುವುದಿಲ್ಲ, 5000 ನೀಡುವಂತೆ ಬೆದರಿಸಿದರು. ಅಷ್ಟು ಹಣ ನೀಡದಿದ್ದಾಗ ನನ್ನನ್ನು ಪೊಲೀಸ್ ಠಾಣೆಯ ವಸತಿ ಗೃಹಕ್ಕೆ ಕರೆದೊಯ್ದು ಹಲ್ಲೆ ನೀಡಿದರು' ಎಂದು ತಿಳಿಸಿದ್ದಾರೆ.

ಈ ವಿಷಯ ತಿಳಿದ ‌ಹಿಂದೂ ಜಾಗರಣೆ ವೇದಿಕೆಯ ಕಾರ್ಯಕರ್ತರು ನಿನ್ನೆ ಕಡಬದ ಆಸ್ಪತ್ರೆ ಎದುರು ಜಮಾಯಿಸಿದ್ದರು. ಪೊಲೀಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾದ ಯುವಕನಿಗೆ ನ್ಯಾಯ ನೀಡದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ನೈಟ್ ಬೀಟ್‌ ಮಫ್ತಿ ಪೊಲೀಸ್​ನಿಂದ ಲಂಚಕ್ಕಾಗಿ ಬೇಡಿಕೆ ಆರೋಪ : ಎಸಿಬಿಗೆ ದೂರು

ABOUT THE AUTHOR

...view details