ಮಂಗಳೂರು: ನಗರದ ಕೊಡಿಯಾಲ್ ಬೈಲ್ನಲ್ಲಿರುವ ಡಯಟ್ ಶಿಕ್ಷಣ ಸಂಸ್ಥೆಗೆ ನುಗ್ಗಿ ಮೂವರು ಮಹಿಳೆಯರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿ ಮಾನಸಿಕ ಅಸ್ವಸ್ಥತನಾಗಿದ್ದು, ಶಿಕ್ಷಕಿ ತನಗೆ ಮಾಟ ಮಾಡಿದ್ದಾರೆಂದು ಗ್ರಹಿಸಿ ಹಲ್ಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಆರೋಪಿ ಕುಂದಾಪುರದ ನವೀನ್ (31) ಎಂಬಾತ ಅದೇ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ. ಈತ ಅದೇ ಶಿಕ್ಷಣ ಸಂಸ್ಥೆಯ ಶಿಕ್ಷಕಿಯೋರ್ವರು ತನ್ನ ಮೇಲೆ ಗೌರವ ಭಾವನೆ ಇಲ್ಲ. ಇವರು ಬೇರೊಬ್ಬ ವಿದ್ಯಾರ್ಥಿಯೊಂದಿಗೆ ಸೇರಿಕೊಂಡು ತನ್ನ ಮೇಲೆ ಮಾಟ ಮಾಡಿದ್ದಾರೆ ಎಂದು ನಂಬಿದ್ದನು. ಈ ಹಿನ್ನೆಲೆಯಲ್ಲಿ ಶಿಕ್ಷಕಿ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.