ಕರ್ನಾಟಕ

karnataka

ETV Bharat / state

ಅಂದರ್​ ಬಾಹರ್​ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ - Puttur in Dakshina Kannada District

ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಅಂದರ್​ ಬಾಹರ್​ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಅವರಿಂದ 5,980 ನಗದು, ಒಂದು ಆಟೋರಿಕ್ಷಾ ಮತ್ತು 4 ಮೋಟಾರ್ ಸೈಕಲನ್ನು ವಶಪಡಿಸಿಕೊಂಡಿದ್ದಾರೆ.

attack-on-gambling-spot-four-arrested
ಅಂದರ್​ ಬಾಹರ್​ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ

By

Published : Oct 12, 2020, 7:57 PM IST

ಪುತ್ತೂರು(ದಕ್ಷಿಣ ಕನ್ನಡ):ಅಂದರ್​ ಬಾಹರ್​ ಅಡ್ಡೆ ಮೇಲೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಸರ್ವೆ ಗ್ರಾಮದಲ್ಲಿ ಘಟನೆ ನಡೆದಿದೆ. ಇಬ್ರಾಹಿಂ (47), ಮಹಮ್ಮದ್ ಹನೀಫ್ (44), ಮಹಮ್ಮದ್ ಕುಂಜ್ಞಿ (45) ಮತ್ತು ಖಾಸಿಂ(42) ಎಂಬ ಆರೋಪಿಗಳನ್ನು ಬಂಧಿಸಿ ಅವರಿಂದ 5,980 ನಗದು, ಒಂದು ಆಟೋರಿಕ್ಷಾ ಮತ್ತು 4 ಮೋಟಾರ್ ಸೈಕಲನ್ನು ವಶಪಡಿಸಿಕೊಂಡಿದ್ದಾರೆ.

ಗ್ರಾಮದ ಸಮೀಪದ ಗುಡ್ಡದಲ್ಲಿ ಜನರು ಗುಂಪು ಸೇರಿಕೊಂಡು ಜುಗಾರಿ ಆಟ ಆಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಅ. 12 ರಂದು ಮದ್ಯಾಹ್ನ ಪುತ್ತೂರು ಗ್ರಾಮಾಂತರ ಠಾಣೆ ಎಸ್ಐ ಮತ್ತು ಸಿಬ್ಬಂದಿಗಳು ಈ ದಾಳಿ ನಡೆಸಿದ್ದಾರೆ. ಆರೋಪಿಗಳ ವಿರುದ್ಧ 87 ಕೆಪಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details