ETV Bharat Karnataka

ಕರ್ನಾಟಕ

karnataka

ETV Bharat / state

ಕೊಲೆ ಯತ್ನ ಪ್ರಕರಣ : ಮೂವರು ಆರೋಪಿಗಳ ಬಂಧನ - Attempt murder case

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ಮಸೀದಿ ರಸ್ತೆಯಲ್ಲಿ ಯುವಕನೋರ್ವನ ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Bantvala
Bantvala
author img

By

Published : Sep 4, 2020, 8:54 PM IST

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಆಲಾಡಿ ಮಸೀದಿ ರಸ್ತೆಯಲ್ಲಿ ಯುವಕನೋರ್ವನ ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಕಲ್ಲಡ್ಕದ ಯತಿನ್, ರಾಜು ಕುಂಪಣಮಜಲು ಹಾಗೂ ಮನೀಶ್ ಕೋಡಿಕೆರೆ ಬಂಧಿತ ಆರೋಪಿಗಳು. ಆ. 7ರಂದು ಆರೋಪಿಗಳು ಆಲಾಡಿ ನಿವಾಸಿ ಶರೀಫ್ ಎಂಬ ಯುವಕನ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ್ದು, ಈ ವೇಳೆ ಶರೀಫ್ ತಪ್ಪಿಸಿಕೊಂಡಿದ್ದರು. ಈ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದು, ಪ್ರಕರಣದ ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ಕಾರು, ಬೈಕ್ ಹಾಗೂ ತಲವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ ಹಾಗೂ ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಅವರ ಮಾರ್ಗದರ್ಶನದಲ್ಲಿ ನಗರ ಪಿಎಸ್ಐ ಅವಿನಾಶ್ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ABOUT THE AUTHOR

author-img

...view details