ಮಂಗಳೂರು:ನಗರದ ಸುರತ್ಕಲ್ ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೋಲಿಸರು ಬಂಧಿಸಿ 1.20 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.
ಗಾಂಜಾ ಮಾರಾಟ ಯತ್ನ: ಸುರತ್ಕಲ್ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ - Attempt to sale ganja
ಸುರತ್ಕಲ್ ರೈಲ್ವೆ ನಿಲ್ದಾಣದ ಬಳಿ ಅಕ್ರಮ ಗಾಂಜಾ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೋಲಿಸರು ಬಂಧಿಸಿ 1.20 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು
ಸುರತ್ಕಲ್ ನಿವಾಸಿಗಳಾದ ಯತೀಶ್ ಕರ್ಕೆರ, ಲಿಖಿತ್ ಬಂಧಿತ ಆರೋಪಿಗಳು.
ಆರೋಪಿಗಳಿಂದ ಸುಮಾರು 1.20 ಕೆ.ಜಿ. ಗಾಂಜಾ ಹಾಗೂ 2 ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಮುಂಬೈ ಠಾಣಾ ನಿವಾಸಿ ದರ್ಶನ್ ಅಲಿಯಾಸ್ ಜೋತ್ಸ್ನಾ ಸಚಿನ್ ಎಂಬಾತನಿಂದ ಗಾಂಜಾ ಖರೀದಿಸಿ, ಮಾರಾಟ ಮಾಡಲೆತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.