ಕರ್ನಾಟಕ

karnataka

ETV Bharat / state

ಎಟಿಎಂ ಜಖಂ ಮಾಡಿ ಕಳವಿಗೆ ಯತ್ನ : ಆರೋಪಿ ಬಂಧನ - ಎಟಿಎಂ ಮೆಷಿನ್, ಸಿಸಿಟಿವಿಗಳನ್ನು ಜಖಂ ಮಾಡಿ ಕಳ್ಳತನಕ್ಕೆ ಯತ್ನ

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಉಪ್ಪಿನಂಗಡಿ ಪೇಟೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಎರಡು ಎಟಿಎಂ ಮೆಷಿನ್ ಹಾಗೂ ರೂಂ ನಲ್ಲಿದ್ದ 3 ಸಿಸಿಟಿವಿ ಕ್ಯಾಮೆರಾಗಳನ್ನು ಜಖಂಗೊಳಿಸಿ, ನಂತರ ಕಳ್ಳತನಕ್ಕೆ ಪ್ರಯತ್ನಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

Attempt to theft in ATM, one Arrested
ಎಟಿಎಂ ಜಖಂ ಮಾಡಿ ಕಳವಿಗೆ ಯತ್ನ

By

Published : May 2, 2021, 3:59 AM IST

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂ ಮೆಷಿನ್, ಸಿಸಿಟಿವಿಗಳನ್ನು ಜಖಂ ಮಾಡಿ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಡಬ ತಾಲ್ಲೂಕಿನ ಸವಣೂರು ಗ್ರಾಮದ ಚಾಪಳ್ಳ ಮಸೀದಿ ಹತ್ತಿರದ ಶಾಂತಿನಗರ ಮಾಂತೇರು ಮನೆ ನಿವಾಸಿ ಮಹಮ್ಮದ್ ಎಂಬವರ ಪುತ್ರ ಸಮೀರ್ ಯಾನೆ ಅಮ್ಮಿ(23) ಎಂದು ಗುರುತಿಸಲಾಗಿದೆ.

ಈತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಉಪ್ಪಿನಂಗಡಿ ಪೇಟೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಎರಡು ಎಟಿಎಂ ಮೆಷಿನ್ ಹಾಗೂ ರೂಂ ನಲ್ಲಿದ್ದ 3 ಸಿಸಿಟಿವಿ ಕ್ಯಾಮೆರಾಗಳನ್ನು ಜಖಂಗೊಳಿಸಿ, ನಂತರ ಕಳ್ಳತನಕ್ಕೆ ಪ್ರಯತ್ನಿಸಿದ್ದ. ಈ ಕುರಿತು ಇಲ್ಲಿನ ಬ್ಯಾಂಕ್ ಮ್ಯಾನೇಜರ್ ಶ್ರೀಧರ್‌ ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ತನಿಖೆ ಕೈಗೆತ್ತಿಗೊಂಡ ಪೊಲೀಸರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details