ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ನೀಡಿದ ಪ್ರಕರಣ ಸುಬ್ರಹ್ಮಣ್ಯ-ಮಂಗಳೂರು ರೈಲಿನಲ್ಲಿ ನಡೆದಿದೆ.
ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಬಂಧಿತ ಆರೋಪಿ.
ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ನೀಡಿದ ಪ್ರಕರಣ ಸುಬ್ರಹ್ಮಣ್ಯ-ಮಂಗಳೂರು ರೈಲಿನಲ್ಲಿ ನಡೆದಿದೆ.
ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಬಂಧಿತ ಆರೋಪಿ.
ಸುಬ್ರಹ್ಮಣ್ಯ ರಸ್ತೆ- ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿ ಮಹಿಳೆಯೊಬ್ಬರೇ ಇರುವುದನ್ನು ಗಮನಿಸಿ, ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಮಹಿಳೆ ಸೀಟಿನ ಮೇಲಿರುವ ತುರ್ತು ಚೈನ್ ಎಳೆದು ರೈಲು ನಿಲ್ಲಿಸಿದ್ದಾರೆ. ತಕ್ಷಣವೇ ಚಲಿಸುತ್ತಿರುವ ರೈಲಿಂದ ಹೊರ ಹಾರಿದ ಆರೋಪಿ ಪರಾರಿಯಾಗಿದ್ದ.
ಬಳಿಕ ಕೋಡಿಂಬಾಳ ರೈಲ್ವೇ ನಿಲ್ದಾಣದ ಬಳಿ ಆತನನ್ನು ಹಿಡಿದ ಸಾರ್ವಜನಿಕರು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಡಬ ಪೊಲೀಸರು ಆರೋಪಿಯನ್ನು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.