ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ವ್ಯಕ್ತಿವೋರ್ವ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಳಂತಿಲ ಪ್ರದೇಶದ ಬಾಲಕಿಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಕ್ಕಡದ ನಿವಾಸಿಯೊಬ್ಬ ಕಾರಿನಲ್ಲಿ ಬಂದು ತನ್ನ ಕಾರಿನಲ್ಲಿ ಬರಬೇಕು ಎಂದು ಒತ್ತಾಯಿಸಿದ್ದಾನೆ. ಈ ಸಂದರ್ಭದಲ್ಲಿ ಬಾಲಕಿ ಒಪ್ಪದೇ ಇದ್ದಾಗ ಆಕೆಯನ್ನು ಬೆದರಿಸಿ ಬಲವಂತವಾಗಿ ಕಾರಿನಲ್ಲಿ ಉಪ್ಪಿನಂಗಡಿ ಕಡೆಗೆ ಕರೆದುಕೊಂಡು ಹೋಗಿ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಹಿಂಸೆ ನೀಡಲು ಯತ್ನಿಸಿದ್ದಾನೆ.