ಸುಳ್ಯ(ದಕ್ಷಿಣ ಕನ್ನಡ):ಪಿಸ್ತೂಲ್‌ನಿಂದ ಗುಂಡು ಹಾರಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಳ್ಯದ ಕಸಬಾ ತಾಲೂಕು ಜಟ್ಟಿಪಳ್ಳ ನಿವಾಸಿಯಾದ ಕೇಶವಪ್ರಭು (60) ಎಂಬುವರು ಮನೆಯ ಸಿಟೌಟ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರ ವಿರುದ್ಧ ಸುಳ್ಯ ಪೊಲೀಸ್ ಉಪನಿರೀಕ್ಷಕರಾದ ದಿಲೀಪ್ ಜಿ.ಆರ್ ದೂರು ದಾಖಲಿಸಿದ್ದಾರೆ.
ಕೇಶವಪ್ರಭು ಮನೆಯಲ್ಲಿ ಅವರ ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಗಂಭೀರ ಗಾಯಗೊಂಡು ಬಿದ್ದಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.