ಮಂಗಳೂರು: ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಲ್ಲಲ್ಲಿ ಗುಡ್ಡ ಕುಸಿತವಾಗುತ್ತಿದೆ. ಪರಿಣಾಮ ರಸ್ತೆಗಳು ಸಂಪೂರ್ಣ ನಾಶವಾಗಿದ್ದು, ದುರಸ್ತಿಗೆ ತಿಂಗಳುಗಳೇ ಬೇಕು. ಈ ಹಿನ್ನೆಲೆಯಲ್ಲಿ ಆಗಸ್ಟ್ 15ರಿಂದ ಸೆಪ್ಟಂಬರ್ 14ರವರೆಗೆ ವಾಹನ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ನಿರಂತರ ಗುಡ್ಡ ಕುಸಿತ: ಆ15ರಿಂದ ಸೆ14ರವರೆಗೆ ಚಾರ್ಮಾಡಿ ಘಾಟಿ ರಸ್ತೆ ಬಂದ್ - Ordinance of the Collector
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ನಿರಂತರವಾಗಿ ಗುಡ್ಡ ಕುಸಿತವಾಗುತ್ತಿದೆ. ಅಲ್ಲದೆ ಕಳೆದ ಒಂದು ವಾರದಿಂದ ಸುರಿದ ಭೀಕರ ಮಳೆಗೆ ಘಾಟಿ ರಸ್ತೆ ಸಂಪೂರ್ಣ ಹಾಳಾಗಿದ್ದು, ದುರಸ್ತಿ ಮಾಡಲು ತಿಂಗಳುಗಳೇ ಬೇಕಾಗಬಹುದು. ಈ ಹಿನ್ನಲೆ ಚಾರ್ಮಾಡಿ ಘಾಟಿಯಲ್ಲಿ ಆಗಸ್ಟ್ 15ರಿಂದ ಸೆಪ್ಟೆಂಬರ್ 14ರವರೆಗೆ ಸಂಚಾರವನ್ನು ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗುಡ್ಡ ಪ್ರದೇಶದಿಂದ ಬಿದ್ದಿರುವ ಮಣ್ಣು ತೆರವುಗೊಳಿಸಿ ದುರಸ್ತಿ ಗೊಳಿಸಿದ್ದರೂ, ಗುಡ್ಡಗಳು ಕುಸಿಯುತ್ತಲೇ ಇದೆ. ಪರಿಣಾಮ ನಿರಂತರ ರಸ್ತೆ ದುರಸ್ತಿ ಕಾರ್ಯ ಮಾಡಲಾಗುತ್ತಿದೆ. ಆದರೆ ಘಾಟಿಯ ಕೆಲವೊಂದು ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ರಸ್ತೆ ಕುಸಿದಿರುವುದರಿಂದ ಸಂಪೂರ್ಣ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬದಲಿ ಮಾರ್ಗಗಳ ಮುಖಾಂತರ ವಾಹನ ಸಂಚಾರ ನಡೆಸಬೇಕೆಂದು ಜಿಲ್ಲಾಡಳಿತ ಆದೇಶ ನೀಡಿದೆ. ಆದ್ದರಿಂದ ಉಜಿರೆ-ಧರ್ಮಸ್ಥಳ-ಕೊಕ್ಕಡ-ಗುಂಡ್ಯ-ಶಿರಾಡಿ ಮೂಲಕ ಹಾಗೂ ಮೂಡಿಗೆರೆ ಹ್ಯಾಂಡ್ ಪೋಸ್ಟ್-ಜನ್ನಾಪುರ-ಆನೆಮಹಲ್-ಗುಂಡ್ಯ ಮಾರ್ಗವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.