ಕರ್ನಾಟಕ

karnataka

ETV Bharat / state

ಸ್ವಚ್ಛ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದ,ಕ ಜಿಲ್ಲಾಳಿತದಿಂದ ಪ್ರಶಸ್ತಿ - ಸ್ವಚ್ಚ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದ,ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಶಸ್ತಿ

ಮಂಗಳೂರು: ಸ್ವಚ್ಛತೆ ಕಾಯ್ದುಕೊಂಡ ಜಿಲ್ಲೆಯ 28 ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 25,50,000 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿತರಿಸಲಾಯಿತು.

ಸ್ವಚ್ಚ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದ,ಕ ಜಿಲ್ಲಾಳಿತದಿಂದ ಪ್ರಶಸ್ತಿ

By

Published : Nov 21, 2019, 8:27 PM IST

ಮಂಗಳೂರು:ಸ್ವಚ್ಛ, ಸ್ವಾಸ್ಥ ಹಾಗೂ ಸರ್ವರ್ತ್ರ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೊಡಮಾಡುವ ಕಾಯಕಲ್ಪ ಪ್ರಶಸ್ತಿಯನ್ನು ದ.ಕ.ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಮ್ಮ ಕಚೇರಿಯಲ್ಲಿ ಪ್ರದಾನ ಮಾಡಿದರು.

ಸ್ವಚ್ಚ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದ,ಕ ಜಿಲ್ಲಾಳಿತದಿಂದ ಪ್ರಶಸ್ತಿ
ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಗೆ ಈ ಪ್ರಶಸ್ತಿ ಲಭಿಸಿದ್ದು, ಇದು ತಲಾ ಮೂರು ಲಕ್ಷ ರೂ. ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಒಳಗೊಂಡಿದೆ.ಅಲ್ಲದೆ ಮೂರು ತಾಲೂಕು ಆಸ್ಪತ್ರೆಗೆ ತಲಾ ಒಂದು ಲಕ್ಷ ರೂ. ನಗದು, ಪ್ರಶಸ್ತಿ ಪ್ರಮಾಣ ಪತ್ರ, ಮತ್ತು ನಾಲ್ಕು ಕಮ್ಯುನಿಟಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ ಒಂದು ಲಕ್ಷ ರೂ. ನಗದು, ಪ್ರಮಾಣ ಪತ್ರ ನೀಡಲಾಯಿತು.

ಜಿಲ್ಲೆಯ 17 ಜಿಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ 50 ಸಾವಿರ ರೂ.ನಂತೆ ನಗದು, ಪ್ರಶಸ್ತಿ ಪ್ರಮಾಣ ಪತ್ರ ನೀಡಲಾಯಿತು.

ABOUT THE AUTHOR

...view details