ಕರ್ನಾಟಕ

karnataka

ETV Bharat / state

ಕನ್ನಡ ಶಾಲಾ ಮಕ್ಕಳ ಹಬ್ಬ ಹೆಸರಿನಲ್ಲಿ ಬಿಜೆಪಿಯಿಂದ ಅಧಿಕಾರ ದುರುಪಯೋಗ: ರಮಾನಾಥ ರೈ - ಈ ಟಿವಿ ಬಾರತ ಕನ್ನಡ

ಕನ್ನಡ ಶಾಲಾ ಮಕ್ಕಳ ಹಬ್ಬ ಹೆಸರಿನಲ್ಲಿ ಬಿಜೆಪಿಯು ಸಂಘ ನಿಕೇತನದಲ್ಲಿ ನಡೆಸುತ್ತಿರುವ ಕಾರ್ಯಕ್ರಮದಲ್ಲಿ‌ ಅಧಿಕಾರ ದುರುಪಯೋಗ ಮಾಡಲಾಗಿದೆ ಎಂದು ರಮಾನಾಥ ರೈ ಆರೋಪಿಸಿದರು.

Former minister B Ramanatha Rai
ಮಾಜಿ ಸಚಿವ ಬಿ ರಮಾನಾಥ ರೈ

By

Published : Nov 18, 2022, 3:13 PM IST

ಮಂಗಳೂರು: ಕನ್ನಡ ಶಾಲಾ ಮಕ್ಕಳ ಹಬ್ಬ ಎಂಬ ಹೆಸರಿನಲ್ಲಿ ಕೇಶವ ಕೃಪಾ ಸಂವರ್ಧನಾ ಸಮಿತಿ ಎಂಬ ಬಿಜೆಪಿ ಘಟಕವು ಸಂಘ ನಿಕೇತನದಲ್ಲಿ ನಡೆಸುತ್ತಿರುವ ಕಾರ್ಯಕ್ರಮದಲ್ಲಿ‌ ಅಧಿಕಾರ ದುರುಪಯೋಗ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆರೋಪಿಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ಕನ್ನಡ ಶಾಲಾ ‌ಮಕ್ಕಳ ಹಬ್ಬಕ್ಕೆ ಡಿಡಿಪಿಐಯವರು ಸುತ್ತೋಲೆ ಹೊರಡಿಸಿ ಶಿಕ್ಷಕರಲ್ಲಿ ಮಕ್ಕಳನ್ನು ಭಾಗವಹಿಸಲು ಕರೆತರುವಂತೆ ಕೋರಿದ್ದಾರೆ. ಇಲ್ಲಿ ಅಧಿಕಾರದ ದುರುಪಯೋಗವಾಗಿದೆ ಎಂದರು.

ಸರಕಾರವೇ ಇಂತಹ ಕಾರ್ಯಕ್ರಮ ಮಾಡುವುದರಲ್ಲಿ ತಪ್ಪಿಲ್ಲ. ಆದರೆ ಪಕ್ಷವೊಂದರ ಮೂಲಕ ನಡೆಸುವ ಕಾರ್ಯಕ್ರಮಕ್ಕೆ ಡಿಡಿಪಿಐ ಸುತ್ತೋಲೆ ಹೊರಡಿಸುವುದು ತಪ್ಪು. ಈ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಕೇಂದ್ರ ಸರ್ಕಾರ ಕನ್ನಡಿಗರನ್ನು 'ಜಲದಾಸ್ಯ'ಕ್ಕೆ ದೂಡುವುದನ್ನು ಸಹಿಸುವುದಿಲ್ಲ: ಹೆಚ್​ಡಿಕೆ

ABOUT THE AUTHOR

...view details