ಮಂಗಳೂರು: ಅಯೋಧ್ಯೆಯಲ್ಲಿ ನಾಳೆ ರಾಮಮಂದಿರದ ಭೂಮಿ ಪೂಜೆ ನಡೆಯುವ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ದ.ಕ.ಜಿಲ್ಲೆಯಾದ್ಯಂತ ಮದ್ಯದಂಗಡಿಗಳನ್ನು ಮುಚ್ಚುವಂತೆ ದ.ಕ. ಜಿಲ್ಲಾಧಿಕಾರಿ ಡಾ. ಕೆ. ವಿ.ರಾಜೇಂದ್ರ ಆದೇಶಿಸಿದ್ದಾರೆ.
ರಾಮಮಂದಿರ ಭೂಮಿ ಪೂಜೆ: ಮದ್ಯದಂಗಡಿ ಮುಚ್ಚಲು ದಕ್ಷಿಣ ಕನ್ನಡ ಡಿಸಿ ಆದೇಶ...!
ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯದಂಗಡಿಗಳನ್ನು ಇಂದು ಸಂಜೆ 6 ಗಂಟೆಯಿಂದ ಆ.6ರ ಬೆಳಗ್ಗೆ 9ರವರೆಗೆ ಬಂದ್ ಮಾಡಲು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇತರೆ ಸಮುದಾಯದ ಧಾರ್ಮಿಕ ಸಂಘಟನೆಗಳಿಂದ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಗಲಭೆ ನಡೆಯುವ ಸಾಧ್ಯತೆಗಳಿವೆ. ಹಾಗಾಗಿ ಕಿಡಿಗೇಡಿಗಳು ಮದ್ಯ ಸೇವಿಸಿ ಕಿರುಕುಳ, ಪ್ರಾಣಹಾನಿ, ಆಸ್ತಿ-ಪಾಸ್ತಿಗಳಿಗೆ ಹಾನಿಯನ್ನುಂಟು ಮಾಡುವ ಸಾಧ್ಯತೆಗಳಿವೆ. ಇದನ್ನು ತಪ್ಪಿಸಲು ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯದಂಗಡಿಗಳನ್ನು ಇಂದು ಸಂಜೆ 6 ಗಂಟೆಯಿಂದ ಆ.6ರ ಬೆಳಗ್ಗೆ 9ರವರೆಗೆ ಮುಚ್ಚಲು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.