ಮಂಗಳೂರು:ಪಾಸ್ಪೋರ್ಟ್ ಸಹಿತ ಯಾವುದೇ ದಾಖಲೆಗಳಿಲ್ಲದ ಬಾಂಗ್ಲಾ ದೇಶದ ವ್ಯಕ್ತಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ.
ಮೂಡುಬಿದಿರೆಯಲ್ಲಿ ಬಾಂಗ್ಲಾ ಮೂಲದ ವ್ಯಕ್ತಿ ಪೊಲೀಸ್ ವಶಕ್ಕೆ - Moodabidri news
ದಾಖಲೆಗಳಿಲ್ಲದ ಬಾಂಗ್ಲಾ ದೇಶದ ವ್ಯಕ್ತಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಮೂಡುಬಿದಿರೆಯಲ್ಲಿ ಬಾಂಗ್ಲಾ ಮೂಲದ ವ್ಯಕ್ತಿ ಪೊಲೀಸ್ ವಶಕ್ಕೆ
ಬಾಂಗ್ಲಾ ನಿವಾಸಿ ದುಲಾಯಿ ಬೈರಾಗಿ (55) ಬಂಧಿತ ವ್ಯಕ್ತಿ. ಮೂಡುಬಿದಿರೆ ಬೀಟ್ ಪೋಲೀಸರಿಗೆ ಈತನ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ತಿಳಿದ ತಕ್ಷಣ ಕಾರ್ಯ ಪ್ರವೃತ್ತರಾದ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀನಿವಾಸ ಗೌಡ ನೇತೃತ್ವದ ತಂಡ ತಕ್ಷಣ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಮಾನಸಿಕ ಅಸ್ವಸ್ಥನಂತೆ ಕಂಡು ಬಂದಿದ್ದು, ಈತನ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.