ಕರ್ನಾಟಕ

karnataka

ETV Bharat / state

ಲಯನ್ಸ್ ಕ್ಲಬ್ ಬಂಟ್ವಾಳಕ್ಕೆ 2019-20ನೇ ಸಾಲಿನ ಅತ್ಯುತ್ತಮ ಕ್ಲಬ್ ಪ್ರಶಸ್ತಿ - Bantwal lions club

ಉತ್ತಮ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಬಂಟ್ವಾಳ ಲಯನ್ಸ್ ಕ್ಲಬ್ ಈ ಸಾಲಿನಲ್ಲಿ ಉತ್ತಮ ಸೇವೆಗೈದ ಕ್ಲಬ್ ಆಗಿ ಹೊರಹೊಮ್ಮಿದೆ.

Bantvala
Bantvala

By

Published : Oct 7, 2020, 5:29 PM IST

ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳವು 2019-20ನೇ ಸಾಲಿನಲ್ಲಿ ಮಾಡಿದ ವಿವಿಧ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳಿಗಾಗಿ ಈ ಸಾಲಿನ ಅತ್ಯುತ್ತಮ ಕ್ಲಬ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಮಂಗಳೂರಿನ ಸೆಬಾಸ್ಟಿಯನ್ ಹಾಲ್ ನಲ್ಲಿ ನಡೆದ ದಿಲ್ಸೇ ಜಿಲ್ಲಾ ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ರಾಜ್ಯಪಾಲ ರೊನಾಲ್ಡ್ ಗೋಮ್ಸ್ ಅವರಿಂದ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಮತ್ತವರ ತಂಡ ಪ್ರಶಸ್ತಿ ಸ್ವೀಕರಿಸಿತು. ಕಳೆದ 48 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಲಯನ್ಸ್ ಕ್ಲಬ್ ಮೊದಲ ಸ್ಥಾನ ಪಡೆದುಕೊಂಡಿದೆ.

ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕಾರ್ಯದರ್ಶಿ ರಾಧಾಕಷ್ಣ ಬಂಟ್ವಾಳ ಹಾಗೂ ಕೋಶಾಧಿಕಾರಿ ದೇವಿಕಾ ದಾಮೋದರ್ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು, ಕ್ಲಬ್ ಸ್ಥಾಪಕಾಧ್ಯಕ್ಷ ಡಾ. ಬಿ. ವಸಂತ ಬಾಳಿಗಾ, ಪೂರ್ವಾಧ್ಯಕ್ಷ ದಾಮೋದರ ಬಿ.ಎಂ. ನೇತೃತ್ವದಲ್ಲಿ ಲಯನ್ಸ್ ಸೇವಾ ಟ್ರಸ್ಟ್ ಮೂಲಕ ನಿರ್ಮಲ ಹೃದಯ ಲಯನ್ಸ್ ವಿಶೇಷ ಚೇತನ ಮಕ್ಕಳ ಪಾಲನಾ ಕೇಂದ್ರ ಲಯನ್ಸ್ ಕ್ಲಬ್ ವತಿಯಿಂದ ಕಳೆದ 11 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ. ಲಯನ್ಸ್ ಕ್ಲಬ್ ಬಂಟ್ವಾಳದ ಸದಸ್ಯ ವಸಂತ ಕುಮಾರ್ ಶೆಟ್ಟಿಯವರು ಮುಂದಿನ ಸಾಲಿನ ಜಿಲ್ಲಾ ರಾಜ್ಯಪಾಲರಾಗಿ ಸೇವೆ ಸಲ್ಲಿಸಲಿದ್ದಾರೆ.

ಈ ವೇಳೆ ಜಿಲ್ಲಾ ಪ್ರಥಮ ಮಹಿಳೆ ಅನಿತಾ ಗೋಮ್ಸ್, ಪ್ರಥಮ ಉಪರಾಜ್ಯಪಾಲ ವಸಂತ್ ಕುಮಾರ್ ಶೆಟ್ಟಿ, ಜಿಲ್ಲಾ ಸಂಪುಟ ಕಾರ್ಯದರ್ಶಿ ವಿಜಯ ವಿಷ್ಣು ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details