ಕರ್ನಾಟಕ

karnataka

ETV Bharat / state

ಬಂಟ್ವಾಳ: ಅ. 13ರಂದು ಕಾಂಗ್ರೆಸ್​ನಿಂದ ಸಾಮೂಹಿಕ ಪ್ರತಿಭಟನೆ - protests by Congress on Oct. 13

ರಾಜ್ಯ ಬಿಜೆಪಿ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಹಿನ್ನೆಲೆ ಅ. 13ರಂದು ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಏಕಕಾಲದಲ್ಲಿ ಸಾಮೂಹಿಕ ಪ್ರತಿಭಟನೆ ಕಾಂಗ್ರೆಸ್​ನಿಂದ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಸಚಿವ ಬಿ. ರಮಾನಾಥ ರೈ
ಮಾಜಿ ಸಚಿವ ಬಿ. ರಮಾನಾಥ ರೈ

By

Published : Oct 12, 2020, 7:22 AM IST

ಬಂಟ್ವಾಳ (ದಕ್ಷಿಣ ಕನ್ನಡ): ವಿಧಾನಸಭಾ ಕ್ಷೇತ್ರದ ಎಲ್ಲಾ 39 ಗ್ರಾಪಂ ಕಚೇರಿಗಳ ಮುಂಭಾಗ ಅ. 13ರಂದು ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಏಕಕಾಲದಲ್ಲಿ ಬೆಳಗ್ಗೆ 10.30ಕ್ಕೆ ಸಾಮೂಹಿಕ ಪ್ರತಿಭಟನೆ ಕಾಂಗ್ರೆಸ್​​ನಿಂದ ನಡೆಯಲಿದೆ.

ರಾಜ್ಯ ಬಿಜೆಪಿ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಹಿನ್ನೆಲೆ ಪ್ರತಿಭಟನೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿಗಳು ಬಿಜೆಪಿ ಸರ್ಕಾರ ಬಂದ ಮೇಲೆ ಶಕ್ತಿಹೀನವಾಗಿವೆ. ಆಡಳಿತ ಯಂತ್ರ ಸ್ಥಗಿತಗೊಂಡಿದೆ. ಅನುದಾನಗಳು ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂಬಿತ್ಯಾದಿ ದೂರುಗಳನ್ನು ಕಾಂಗ್ರೆಸ್ ಮಾಡಿದೆ. ಈ ಹಿನ್ನೆಲೆ ಪ್ರತಿ ಗ್ರಾಪಂಗಳ ಎದುರು ಏಕಕಾಲದಲ್ಲಿ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಕಾರ್ಯಕರ್ತರು ಆಯಾ ಗ್ರಾಪಂಗಳ ಮುಂಭಾಗ ಸಾಮಾಜಿಕ ಅಂತರವನ್ನು ಕಾಪಾಡಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಬ್ಲಾಕ್ ಅಧ್ಯಕ್ಷರು ಸೂಚಿಸಿದ್ದಾರೆ.

ABOUT THE AUTHOR

...view details