ಕರ್ನಾಟಕ

karnataka

ETV Bharat / state

ಬಂಟ್ವಾಳದಲ್ಲಿ ಶೇ.10ರಷ್ಟು ಕೊರೊನಾ ತಪಾಸಣೆ ನಡೆದಿಲ್ಲ: ಆರೋಗ್ಯಾಧಿಕಾರಿ - KDP meeting

ಬಂಟ್ವಾಳ ತಾಲೂಕಿನಲ್ಲಿ ನಡೆಯುತ್ತಿರುವ ಕೊರೊನಾ ತಪಾಸಣಾ ಶಿಬಿರದಲ್ಲಿ ಜನಸಂಖ್ಯೆಯ ಶೇ.10 ರಷ್ಟು ಕೂಡ ತಪಾಸಣೆ ನಡೆದಿಲ್ಲ. ಎಲ್ಲರೂ ಭಯವಿಲ್ಲದೆ ತಪಾಸಣಾ ಶಿಬಿರಗಳಿಗೆ ಹಾಜರಾಗಬೇಕು ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Kdp meeting
Kdp meeting

By

Published : Oct 8, 2020, 3:43 PM IST

ಬಂಟ್ವಾಳ: ಬಂಟ್ವಾಳ ತಾ.ಪಂ ಮಾಸಿಕ ಕೆಡಿಪಿ ಸಭೆಯು ಬಿ.ಸಿ.ರೋಡಿನಲ್ಲಿರುವ ತಾ.ಪಂ ಎಸ್ ಸಿ, ಎಸ್ ಟಿ ಸಭಾಂಗಣದಲ್ಲಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮಾತನಾಡಿ, ಪ್ರಥಮ ಹಂತದ ಶಿಬಿರದಲ್ಲಿ ಸುಮಾರು 4,500 ರಷ್ಟು ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದು, ಆದರೆ ನಮ್ಮ ಜನಸಂಖ್ಯೆಗೆ ಹೋಲಿಸಿದರೆ ಶೇ. 10 ರಷ್ಟು ಪರೀಕ್ಷೆ ನಡೆದಿಲ್ಲ. ಹೀಗಾಗಿ ಹೆಚ್ಚಿನ ಜನರು ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದರು.

ನಂತರ ಪಶು ಸಂಗೋಪನಾ ಇಲಾಖೆಯ ಅಧಿಕಾರಿ ಮಾತನಾಡಿ, ಜಾನುವಾರುಗಳನ್ನು ಸಾಗಾಟ ಮಾಡುವ ವೇಳೆ ಪಶು ಸಂಗೋಪನಾ ಇಲಾಖೆಯ ಹೋಬಳಿ ಮಟ್ಟದ ಅಧಿಕಾರಿಗಳ ಅನುಮತಿ ಅಗತ್ಯವಾಗಿದೆ ಎಂದು ಹೇಳಿದರು.

ಚೆನ್ನೈತೋಡಿ ಗ್ರಾ.ಪಂ.ನಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಮಾಡುವುದಕ್ಕೆ ಕನಿಷ್ಟ ಅರ್ಧ ಎಕರೆಯಾದರು ಜಾಗ ಬೇಕಾಗುತ್ತದೆ ಎಂದು ಗ್ರಾ.ಪಂ.ನ ಆಡಳಿತಾಧಿಕಾರಿ ಪ್ರದೀಪ್ ಡಿಸೋಜಾ ಅವರು ಮನವಿ ಮಾಡಿದರು.

ಈ ವೇಳೆ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ABOUT THE AUTHOR

...view details