ಕರ್ನಾಟಕ

karnataka

ಕತಾರ್: ಫಿಫಾ ವರ್ಲ್ಡ್​​​​ಕಪ್ ಮೆಡಿಕಲ್ ಟೀಮ್​ಗೆ ಬಂಟ್ವಾಳದ ಮಹಿಳೆ ಆಯ್ಕೆ

ಕತಾರ್​ನಲ್ಲಿ ನಡೆಯುತ್ತಿರುವ ಕಾಲ್ಚೆಂಡಿನ ವಿಶ್ವಕಪ್​ನ ಮೆಡಿಕಲ್ ಟೀಮ್​ಗೆ ಕರ್ನಾಟಕ ಮೂಲದ ಮಹಿಳೆ ಒಬ್ಬರು ಆಯ್ಕೆಯಾಗಿದ್ದಾರೆ. ಈ ಮೂಲಕ ವರ್ಲ್ಡ್ ಕಪ್ ಮೆಡಿಕಲ್ ಟೀಮ್​ಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

By

Published : Nov 25, 2022, 7:13 PM IST

Published : Nov 25, 2022, 7:13 PM IST

bantwal-woman-selected-for-fifa-world-cup-medical-team
ಫಿಫಾ ವರ್ಲ್ಡ್ ಕಪ್

ಬಂಟ್ವಾಳ(ದಕ್ಷಿಣ ಕನ್ನಡ): ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮ್​ಗೆ ಸೇವೆ ಸಲ್ಲಿಸಲು ತುಳುನಾಡಿನ ಅದರಲ್ಲೂ ಬಂಟ್ವಾಳ ತಾಲೂಕಿನ ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್. ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮ್​ನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದಾರೆ.

ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮ್​ಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸೂರಂಡೆ ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಶ್ರೀಮತಿ ದಂಪತಿಗಳ ಪುತ್ರಿಯಾದ ಪ್ರತಿಭಾ ಅವರು ವಾಮದಪದವು ಸಮೀಪದ ಕುಡಂಬೆಟ್ಟು ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರನ್ನು ವಿವಾಹವಾಗಿದ್ದು, ಸಂಸಾರ ಸಹಿತ ಕಳೆದ ಕೆಲವು ವರ್ಷಗಳಿಂದ ದೋಹಾ ಕತಾರಿನಲ್ಲಿ ನೆಲೆಯಾಗಿದ್ದಾರೆ.

ಫಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮ್​ಗೆ ಬಂಟ್ವಾಳದ ಮಹಿಳೆ ಆಯ್ಕೆ

ಪ್ರತಿಭಾ ಎನ್.ದರ್ಖಾಸು ಅವರು ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಷನ್ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಕೊರೋನಾ ಹಾಗೂ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆ ಗುರುತಿಸಿ ಈಗಾಗಲೇ ಗೌರವಿಸಲಾಗಿತ್ತು. ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ:ರೊನಾಲ್ಡೊ ದಾಖಲೆಯ ಆಟಕ್ಕೆ ಮಣಿದ ಘಾನಾ; ಸರ್ಬಿಯಾ ವಿರುದ್ಧ ಬ್ರೆಜಿಲ್‌ಗೆ ವಿಜಯ

ABOUT THE AUTHOR

...view details