ಬಂಟ್ವಾಳ: ತಾಲೂಕಿನ ಮಿನಿ ವಿಧಾನಸೌಧದಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ರಕ್ತ ದಾನದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಂದಾಯ ಇಲಾಖೆ ಬಂಟ್ವಾಳ, ದೇರಳಕಟ್ಟೆ ಜ. ಕೆ.ಎಸ್.ಹೆಗ್ಡೆ ಆಸ್ಪತ್ರೆ, ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ತಾಲೂಕು ಕಂದಾಯ ಇಲಾಖಾ ಸಿಬ್ಬಂದಿಯಿಂದ ರಕ್ತದಾನ ಶಿಬಿರ ನಡೆಯಿತು.
ತಹಶೀಲ್ದಾರ್ ರಶ್ಮಿ ಎಸ್.ಆರ್ ಸ್ವತಃ ರಕ್ತದಾನ ದಾನ ಮಾಡುವ ಮೂಲಕ ಇಲಾಖಾ ಸಿಬ್ಬಂದಿಗಳಿಗೆ ಸ್ಪೂರ್ತಿಯಾದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಗಾಂಧಿ ಜಯಂತಿ ಎಲ್ಲೆಡೆಯೂ ಅನುಕರಣೀಯ ಎಂದರು.
ಕಾರ್ಯಕ್ರಮದ ಹಿನ್ನೆಲೆ ಸ್ವಚ್ಛತಾ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು. ಕಳೆದ ವರ್ಷವೂ ಸ್ವಚ್ಛತಾ ಕಾರ್ಯವನ್ನು ಕಂದಾಯ ಇಲಾಖೆ ನಡೆಸಿತ್ತು. ಗ್ರಾಮ ಸಹಾಯಕರು, ಗ್ರಾಮಕರಣಿಕರು ಮತ್ತು ಕಚೇರಿ ಸಿಬ್ಬಂದಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಜ.ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಡಾ. ಶ್ರೀಲಕ್ಷ್ಮಿ, ಉಪತಹಶೀಲ್ದಾರ್ಗಳಾದ ರಾಜೇಶ್ ನಾಯ್ಕ್, ರವಿಶಂಕರ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು ಉಪಸ್ಥಿತರಿದ್ದರು.