ಕರ್ನಾಟಕ

karnataka

ETV Bharat / state

ಎಸ್​​ಎಸ್​​ಎಲ್​ಸಿ ಪರೀಕ್ಷೆ...ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಬಂಟ್ವಾಳ ಶಾಸಕರ ನೇತೃತ್ವದಲ್ಲಿ ಸಭೆ

ಜೂನ್​​​ 25 ರಿಂದ ಎಸ್​​​ಎಸ್​​​​ಎಲ್​​​ಸಿ ಪರೀಕ್ಷೆ ಆರಂಭವಾಗಲಿದ್ದು ಇದರ ಸಿದ್ಧತೆಗಳ ಪರಿಶೀಲನೆಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಂಟ್ವಾಳ ಬಿಇಒ ಕಚೇರಿಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

By

Published : Jun 3, 2020, 12:00 AM IST

Bantwala MLA ulippadi
ಎಸ್​​ಎಸ್​​ಎಲ್​ಸಿ ಪರೀಕ್ಷೆ

ಬಂಟ್ವಾಳ(ದಕ್ಷಿಣ ಕನ್ನಡ):ಬಂಟ್ವಾಳ ತಾಲೂಕಿನಲ್ಲಿ 10ನೇ ತರಗತಿಯ ಸುಮಾರು 5,200 ವಿದ್ಯಾರ್ಥಿಗಳು 17 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ಬರೆಯಲಿದ್ದು ಶಿಕ್ಷಕರ ಜೊತೆ ಇತರ ಇಲಾಖಾಧಿಕಾರಿಗಳು ಸಹಕರಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೂಚಿಸಿದ್ದಾರೆ.

ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಿದ ಬಂಟ್ವಾಳ ಶಾಸಕ

ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇನ್ನಿತರ ಪೂರ್ವಭಾವಿ ತಯಾರಿಗಳ ಬಗ್ಗೆ ಇಂದು ಸಭೆ ಸೇರಿ ಚರ್ಚಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕರು ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ, ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಸಂಬಂಧಿಸಿದಂತೆ ಶಿಕ್ಷಕರಿಗೆ ಕೂಡಾ ಪ್ರತ್ಯೇಕ ಜವಾಬ್ದಾರಿಯನ್ನು ನೀಡಲಾಗಿದೆ.

ಇನ್ನು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಹೆತ್ತವರು ಯಾವುದೇ ರೀತಿ ಭಯಪಡುವ ಅವಶ್ಯಕತೆಯಿಲ್ಲ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚಿನ ನಿಗಾವಹಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ತಹಶೀಲ್ದಾರ್ ರಶ್ಮಿ ಎಸ್.ಆರ್​​, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಬುಡಾ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ABOUT THE AUTHOR

...view details