ಬಂಟ್ವಾಳ(ದ. ಕನ್ನಡ): ಬಂಟ್ವಾಳದ ಬಿ.ಸಿ. ರೋಡ್ನ ಮಿತ್ತಬೈಲ್ನಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಧರ್ಮವೊಂದರ ಪ್ರಾರ್ಥನಾ ಮಂದಿರಕ್ಕೆ ಅಕ್ರಮವಾಗಿ ಪ್ರವೇಶಿದ ಆರೋಪಿಯನ್ನು ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ಈ ಬಗ್ಗೆ ಇಲ್ಲಿನ ಪ್ರಾರ್ಥನಾ ಮಂದಿರದವರು ಪೊಲೀಸರಿಗೆ ದೂರು ನೀಡಿದ್ದರು.
60 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಪ್ರಾರ್ಥನಾ ಮಂದಿರಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎನ್ನಲಾಗಿದೆ. ಆತನನ್ನು ವಿಚಾರಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಂಧಿತನನ್ನು ವಿಚಾರಿಸಿದಾಗ ದ್ವಿಚಕ್ರ ವಾಹನದಲ್ಲಿ ಚಾಕು ಸಿಕ್ಕಿದೆ ಎಂದು ದೂರಿದ್ದರು.