ಮಂಗಳೂರು:ರೂಪಾಂತರಿತ ಕೊರೊನಾ ತೀವ್ರವಾಗಿ ಹರಡುವ ಭೀತಿಯ ಹಿನ್ನೆಲೆಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಬೀಚ್ ಪ್ರವೇಶಿಸುವುದನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ.ರಾಜೇಂದ್ರ.ಕೆ.ವಿ ನಿಷೇಧಿಸಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಬ್ರಿಟನ್ನಿಂದ ರಾಜ್ಯಕ್ಕೆ ಇತ್ತೀಚೆಗೆ ಆಗಮಿಸಿರುವ ಪ್ರಯಾಣಿಕರಲ್ಲಿ ಕೋವಿಡ್-19 ಪಾಸಿಟಿವ್ ಇರುವುದು ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಹೊಸ ವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದನ್ನು ನಿಷೇಧಿಸಲಾಗಿದೆ.