ಮಂಗಳೂರಲ್ಲಿ ಗೋಮಾಂಸ ಸಾಗಿಸುತ್ತಿದ್ದ ವಾಹನ ತಡೆದು ವ್ಯಕ್ತಿ ಮೇಲೆ ಹಲ್ಲೆ - ಮಂಗಳೂರು ಕ್ರೈಮ್ ಸುದ್ದಿ
ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಮಾರ್ಗಮಧ್ಯೆ ತಡೆದು ಓರ್ವನಿಗೆ ಥಳಿಸಿ ವಾಹನವನ್ನು ಜಖಂಗೊಳಿಸಿದ ಘಟನೆ ಮಂಗಳೂರು ನಗರದ ಕಂಕನಾಡಿ ಹೈಲ್ಯಾಂಡ್ ಆಸ್ಪತ್ರೆ ಬಳಿ ನಡೆದಿದೆ.
ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನ ಜಖಂ
ಮಂಗಳೂರು: ಕುದ್ರೋಳಿಯ ಕಸಾಯಿಖಾನೆಯಿಂದ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಮಾರ್ಗಮಧ್ಯೆ ತಡೆದು ಓರ್ವನಿಗೆ ಥಳಿಸಿ ವಾಹನವನ್ನು ಜಖಂಗೊಳಿಸಿದ ಘಟನೆ ನಗರದ ಕಂಕನಾಡಿ ಹೈಲ್ಯಾಂಡ್ ಆಸ್ಪತ್ರೆ ಬಳಿ ನಡೆದಿದೆ.
ಈ ಕುರಿತು ಮಂಗಳೂರು ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಭಾನುವಾರ ಕೂಡ ನಗರದ ಕೊಟ್ಟಾರದ ಇನ್ಫೋಸಿಸ್ ಬಳಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ತಡೆದಿದ್ದ ತಂಡವೊಂದು ವಾಹನ ಚಾಲಕನ ಮೇಲೆ ಹಲ್ಲೆ ಮಾಡಿ ವಾಹನವನ್ನು ಜಖಂಗೊಳಿಸಿದ್ದರು. ಈಗ ಅದೇ ರೀತಿಯ ಮತ್ತೊಂದು ಘಟನೆ ಮರುಕಳಿಸಿದೆ.