ಕರ್ನಾಟಕ

karnataka

ETV Bharat / state

ಕುಕ್ಕೆಯಲ್ಲಿ ನಾಳೆಯಿಂದ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಆರಂಭ... ಈ ಷರತ್ತುಗಳು ಅನ್ವಯ - Kukke Subramanya temple latest news

ಕೊರೊನಾದಿಂದ ದಕ್ಷಿಣಕನ್ನಡ ಪುಣ್ಯಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್ಲಾ ರೀತಿಯ ಪೂಜಾ ವಿಧಿ ವಿಧಾನಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ನಾಳೆಯಿಂದ ಕೆಲವು ಷರತ್ತುಗಳ ಮೇಲೆ ಸೇವೆಗಳನ್ನು ಆರಂಭ ಮಾಡಲಾಗಿದೆ.

ಸುಬ್ರಹ್ಮಣ್ಯ
ಸುಬ್ರಹ್ಮಣ್ಯ

By

Published : Sep 13, 2020, 7:19 PM IST

ಸುಬ್ರಹ್ಮಣ್ಯ:ಕೊರೊನಾ ಹಿನ್ನೆಲೆಯಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ ಆರಂಭವಾಗಲಿದೆ.

ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು ನಾಳೆಯಿಂದ ಶುರುವಾಗಲಿದೆ. ಆದರೆ ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗುತ್ತದೆ ಎಂದು ದೇವಾಲಯದ ಆಡಳಿತಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.

ಸೇವಾರ್ಥಿಗಳಿಗೆ ಮಾತ್ರ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತದೆ. ದೇಗುಲವು ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುತ್ತಿದೆ.

ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆಯಲ್ಲಿ ಇಬ್ಬರಿಗೆ ಮಾತ್ರ ಒಂದು ಟಿಕೆಟ್​ನಲ್ಲಿ ಸೇವೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಮಹಾಪೂಜೆ ಮತ್ತು ಪಂಚಾಮೃತ ಸೇವೆಯ ಹತ್ತು ಟಿಕೆಟ್ ಮಾತ್ರ ವಿತರಿಸಲಾಗುತ್ತದೆ. ಸರ್ಪ ಸಂಸ್ಕಾರ ಸೇವೆ ಸಲ್ಲಿಸುವವರಿಗೆ ಎರಡು ದಿನ, ಬೇರೆ ಸೇವೆ ನೀಡುವವರಿಗೆ ಒಂದು ದಿನ ಮಾತ್ರ ದೇವಾಲಯದ ವಸತಿ ಗೃಹದಲ್ಲಿ ತಂಗಲು ಅವಕಾಶ ಕಲ್ಪಿಸಲಾಗುತ್ತದೆ ಎಂಬುದು ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ABOUT THE AUTHOR

...view details