ಕರ್ನಾಟಕ

karnataka

ETV Bharat / state

ಬೆಳ್ತಂಗಡಿ: ಕಾಲೇಜ್ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ - student commits suicide by hanging

ಕತ್ತೋಡಿಬೈಲು ನಿವಾಸಿ ಸೌಮ್ಯಾ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದು, ಕೋವಿಡ್ ನಿಯಮಾವಳಿಯ ರಜಾ ಅವಧಿ ಮುಗಿದ ಬಳಿಕವೂ ತರಗತಿಗೆ ಹಾಜರಾಗದೇ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

ಆತ್ಮಹತ್ಯೆ
ಆತ್ಮಹತ್ಯೆ

By

Published : Feb 19, 2021, 5:12 PM IST

ಬೆಳ್ತಂಗಡಿ: ಕಾಲೇಜು ವಿಧ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕತ್ತೋಡಿಬೈಲು ನಿವಾಸಿ ಸೌಮ್ಯಾ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದು, ಕೋವಿಡ್ ನಿಯಮಾವಳಿಯ ರಜಾ ಅವಧಿ ಮುಗಿದ ಬಳಿಕವೂ ತರಗತಿಗೆ ಹಾಜರಾಗದೇ ಖಿನ್ನತೆಗೊಳಗಾಗಿದ್ದಳು ಎನ್ನಲಾಗಿದೆ.

ಬೆಳಗ್ಗೆ ಎಂದಿನಂತೆ ಮನೆಯಲ್ಲಿ ಉಪಹಾರ ಮುಗಿಸಿದ ನಂತರ ಕಾಣೆಯಾಗಿದ್ದರು. ಮನೆಯವರು ಹುಡುಕಾಡಿದಾಗ ಆಕೆ ಮನೆಯ ಛಾವಣಿಯಲ್ಲಿ ಚೂಡಿದಾರದ ಶಾಲನ್ನು ಕುತ್ತಿಗೆಗೆ ಬಿಗಿದು ಕೃತ್ಯವೆಸಗಿಕೊಂಡಿರುವುದು ಕಂಡುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details