ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬೆಳ್ತಂಗಡಿ ವೃತ್ತ ಪೊಲೀಸ್ ಉಪ ನಿರೀಕ್ಷಕರನ್ನ ದಿಢೀರ್ ವರ್ಗಾವಣೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಉಪ ನಿರೀಕ್ಷಕರ ದಿಢೀರ್ ವರ್ಗಾವಣೆ - ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕರುಗಳ ವರ್ಗಾವಣೆ
ಬೆಳ್ತಂಗಡಿ ವೃತ್ತ ಪೊಲೀಸ್ ಉಪ ನಿರೀಕ್ಷಕರನ್ನು ದಿಢೀರ್ ವರ್ಗಾವಣೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶ ನೀಡಿದ್ದಾರೆ.
![ಬೆಳ್ತಂಗಡಿ ಪೊಲೀಸ್ ಉಪ ನಿರೀಕ್ಷಕರ ದಿಢೀರ್ ವರ್ಗಾವಣೆ Belthangady Deputy Police Inspector Transfer](https://etvbharatimages.akamaized.net/etvbharat/prod-images/768-512-6995079-869-6995079-1588181241664.jpg)
ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕರುಗಳ ಧಿಡೀರ್ ವರ್ಗಾವಣೆ
ಧರ್ಮಸ್ಥಳ ಠಾಣೆಯ ಪಿಎಸ್ಐ ಓಡಿಯಪ್ಪ ಗೌಡರವರನ್ನು ಪುಂಜಾಲಕಟ್ಟೆ ಪಿಎಸ್ಐ (ಅಪರಾಧ) ಆಗಿ ವರ್ಗಾಯಿಸಿ, ಅವರ ಜಾಗಕ್ಕೆ ಧರ್ಮಸ್ಥಳ ಠಾಣೆಗೆ ಬೆಳ್ತಂಗಡಿ ಸಂಚಾರ ಠಾಣೆಯ ಪಿಎಸ್ಐ ಪವನ್ ನಾಯಕ್ ಅವರನ್ನು ನೇಮಕ ಮಾಡಲಾಗಿದೆ.
ಪುಂಜಾಲಕಟ್ಟೆ ಠಾಣೆಯ ಪಿಎಸ್ಐ (ಅಪರಾಧ) ಕುಮಾರ್ ಸಿ. ಕಾಂಬ್ಳೆ ಅವರನ್ನು ಬೆಳ್ತಂಗಡಿ ಸಂಚಾರ ಠಾಣೆಗೆ ವರ್ಗಾಯಿಸಿ ಆದೇಶಿಸಲಾಗಿದೆ.